Hubballi–Dharwad ಕಮೀಷನರೇಟ್ ವ್ಯಾಪ್ತಿಯ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಮಹಾನಿಂಗ ನಂದಗಾವಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದೆ. ಕಳೆದ ಕೆಲವು ವರ್ಷಗಳಿಂದ ಕಮೀಷನರೇಟ್‌ನಲ್ಲಿ ಡಿಸಿಪಿಯಾಗಿ ಸೇವೆ ಸಲ್ಲಿಸಿದ್ದ ನಂದಗಾವಿ ಅವರು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ವಿವಿಧ ಸೂಕ್ಷ್ಮ ಪ್ರಕರಣಗಳು, ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಚುನಾವಣೆ ಸಂದರ್ಭಗಳಲ್ಲಿ ಭದ್ರತಾ ವ್ಯವಸ್ಥೆ ಸಮರ್ಪಕವಾಗಿ ನಿರ್ವಹಿಸಿದ ಹಿನ್ನೆಲೆ ಅವರಿಗೆ ಮೆಚ್ಚುಗೆ ವ್ಯಕ್ತವಾಗಿತ್ತು. ಸದ್ಯ ಅವರನ್ನು ಖಾಲಿ ಇರುವ Karnataka Lokayukta ಇಲಾಖೆಯ ಎಸ್‌ಪಿಯಾಗಿ ನೇಮಕ ಮಾಡಲಾಗಿದೆ. ಈ ವರ್ಗಾವಣೆ ಕಮೀಷನರೇಟ್ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಹೊಸ ಡಿಸಿಪಿ ಯಾರು ಎಂಬುದರ ಬಗ್ಗೆ ಕುತೂಹಲ ಮೂಡಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

