Breaking News

ದಾವಣಗೆರೆ | 4 ಕಾರುಗಳು ಬೆಂಕಿಗೆ ಆಹುತಿ

ಇಲ್ಲಿನ ಪಿ.ಬಿ. ರಸ್ತೆಯ ಎಲ್‌ಐಸಿ ಕಚೇರಿ ಸಮೀಪದ ಗ್ಯಾರೇಜ್‌ನಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಭಸ್ಮವಾಗಿವೆ.ಬೆಳಿಗ್ಗೆ 7ಕ್ಕೆ ಕಾರುಗಳಿಗೆ ಬೆಂಕಿ ಹೊತ್ತಿಕೊಂಡು ಉರಿಯತೊಡಗಿವೆ. ಇದನ್ನು ಗಮನಿಸಿದ ಸಾರ್ವಜನಿಕರು ಅಗ್ನಿಶಾಮಕ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತುಸೇವಾ ಸಿಬ್ಬಂದಿ ಬೆಂಕಿ ಆರಿಸಿದ್ದಾರೆ. ‘ಗ್ಯಾರೇಜ್‌ಗೆ ಬಂದಿದ್ದ ಕಾರುಗಳನ್ನು ಹೊರಭಾಗದಲ್ಲಿ ನಿಲುಗಡೆ ಮಾಡಲಾಗಿತ್ತು. ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ನಾಲ್ಕು ಕಾರುಗಳು ಸುಟ್ಟು ಹೋಗಿವೆ’ ಎಂದು ಗ್ಯಾರೇಜ್‌ ಮಾಲೀಕ ಅರುಣ್‌ ಎಂ.ಆರ್‌. ಗಾಂಧಿನಗರ ಠಾಣೆಗೆ ದೂರು ನೀಡಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *