Breaking News

ಹೊಳಲ್ಕೆರೆ | ಕಾರು ಢಿಕ್ಕಿಯಿಂದ 13 ವಾಹನಗಳು ಜಖಂ

ಹೊಸದುರ್ಗದ ಕಡೆಯಿಂದ ವೇಗವಾಗಿ ಬಂದ ಕಾರು ಎನ್.ಜಿ. ಹಳ್ಳಿ ಗೇಟ್‌ನ ಹುಣಸೆ ಮರದ ಕೆಳಗೆ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ 10 ಬೈಕ್‌ಗಳು, 2 ಕಾರುಗಳು ಹಾಗೂ ಒಂದು ಆಟೊರಿಕ್ಷಾ ಜಖಂಗೊಂಡಿವೆ. ಕಾರು ಚಾಲಕ ಯಶಪಾಲ್ ಸಿಂಗ್ ಹಾಗೂ ಲಕ್ಷ್ಮಿಕುಮಾರ್ ಎಂಬುವರಿಗೆ ಗಾಯಗಳಾಗಿದ್ದು, ಹೊಸದುರ್ಗದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುತ್ತಿಕಟ್ಟೆಯ ಪೈಪ್ ಕಾರ್ಖಾನೆಯ ಮಾಲೀಕ ಯಶಪಾಲ್ ಸಿಂಗ್ ಹುಂಡೈ ಕ್ರೆಟಾ ಕಾರಿನಲ್ಲಿ ಹೊಸದುರ್ಗದ ಕಡೆಯಿಂದ ವೇಗವಾಗಿ ಬರುತ್ತಿದ್ದರು. ಇದೇ ವೇಳೆ ಹೊಳಲ್ಕೆರೆ ಕಡೆಯಿಂದ ಬರುತ್ತಿದ್ದ ಮತ್ತೊಂದು ಕಾರು ಎನ್.ಜಿ. ಹಳ್ಳಿ ಕಡೆಗೆ ತಿರುವು ತೆಗೆದುಕೊಳ್ಳುತ್ತಿತ್ತು. ಈ ಕಾರನ್ನು ತಪ್ಪಿಸಲು ಹೋಗಿ ಹುಣಸೆ ಮರದ ಕೆಳಗೆ ನಿಲ್ಲಿಸಿದ್ದ ವಾಹನಗಳಿಗೆ ಡಿಕ್ಕಿ ಹೊಡೆದಿದ್ದಾರೆ. ಮರದ ಕೆಳಗೆ ನಿಂತಿದ್ದವರು ಓಡಿದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

Share News

About BigTv News

Check Also

ಉಡುಪಿ: ಮದುವೆ ನಿರಾಕರಿಸಿದ ವ್ಯಕ್ತಿಯನ್ನು ಬೆದರಿಸಿ 42ಲಕ್ಷ ರೂ. ಹಣ ವಸೂಲಿ; ಶಿಕ್ಷಕಿ ಸಹಿತ ಇಬ್ಬರ ಬಂಧನ

ಉಡುಪಿ: ಮದುವೆ ಪ್ರಸ್ತಾಪ ನಿರಾಕರಿಸಿದ ವ್ಯಕ್ತಿಗೆ ಸುಳ್ಳು ಪ್ರಕರಣ ದಾಖಲಿಸುವುದಾಗಿ ಬೆದರಿಸಿ ₹42.97 ಲಕ್ಷ ವಸೂಲಿ ಮಾಡಿ ವಂಚಿಸಿದ ಆರೋಪದಲ್ಲಿ …

Leave a Reply

Your email address will not be published. Required fields are marked *