Breaking News

ಹಾಸನ: ಮನೆ ಬೀಗ ಮುರಿದು ₹4.90 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ಚನ್ನರಾಯಪಟ್ಟಣ ತಾಲ್ಲೂಕಿನ ಚಿಕ್ಕನಾಯಕನಹಳ್ಳಿಯಲ್ಲಿ ಮನೆಯ ಬೀಗ ಮುರಿದು ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಗ್ರಾಮದ ಧನಂಜ ಅವರು ಫೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ಮನೆದೇವರಿಗೆ ಹೋಗಿದ್ದರು. ಪೂಜೆ ಮುಗಿಸಿಕೊಂಡು ಮಧ್ಯಾಹ್ನ ವಾಪಸ್ ಮನೆಗೆ ಬಂದಾಗ, ಮನೆಯ ರೂಂನ ಬೀರುವಿನಲ್ಲಿ ಇಟ್ಟಿದ್ದ ₹1.50 ಲಕ್ಷ ನಗದು, ₹2 ಲಕ್ಷ ಮೌಲ್ಯದ 28 ಗ್ರಾಂ ಚಿನ್ನಾಭರಣ ಕಳವಾಗಿರುವುದು ಗೊತ್ತಾಗಿದೆ.ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅರಸೀಕೆರೆ ತಾಲ್ಲೂಕಿನ ಬಂದೂರು ಗ್ರಾಮದ ಮನೆಯ ಬೀರುವಿನಲ್ಲಿ ಇಟ್ಟಿದ್ದ ₹1.40 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಗ್ರಾಮದ ಕಾವ್ಯಾ ಅವರು ಫೆ.15 ರಂದು ಬೆಳಿಗ್ಗೆ ಮನೆಗೆ ಬೀಗ ಹಾಕಿ ಹೋಗಿದ್ದು, ಮಧ್ಯಾಹ್ನ ವಾಪಸ್ ಬಂದು ನೋಡಿದಾಗ, ಬೀರುವಿನ ಲಾಕರ್ ಅನ್ನು ಮುರಿದು, 30 ಗ್ರಾಂ ಚಿನ್ನಾಭರಣ ಕಳವು ಮಾಡಿರುವುದು ಗೊತ್ತಾಗಿದೆ. ಜಾವಗಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

80s ಫೋಟೋ ಟ್ರೆಂಡ್‌ನಲ್ಲೂ ಸೈಬರ್ ವಂಚಕರ ಕನ್ನ: ಹಣ ಕೊಡದಿದ್ದಕ್ಕೆ ಬೆತ್ತಲೆ ಫೋಟೋ ಹರಿಬಿಟ್ಟ ವಂಚಕರು

ಬೆಂಗಳೂರು ಉತ್ತರ ತಾಲೂಕಿನ ಬಾಗಲಗುಂಟೆಯ ವಿನೋದ್ (45) ಎಂಬುವರು 80ರ ದಶಕದ ಶೈಲಿಯಲ್ಲಿ ಫೋಟೋ ಎಡಿಟ್ ಮಾಡಲು ನಕಲಿ ಆ್ಯಪ್ …

Leave a Reply

Your email address will not be published. Required fields are marked *