ರಾಣೆಬೆನ್ನೂರ: ಅಕ್ರಮ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ಮಾಲು ಸಮೇತ ಪೊಲೀಸರು ಬಂಧಿಸಿದ ಘಟನೆ ನಗರದ ಹೊರವಲಯದ ಬೆನಕನಕೊಂಡ ರಸ್ತೆ ಬಳಿ ನಡೆದಿದೆ.ಧಾರವಾಡದ ನವೀನ್ ಸುಭಾಸ ಶಲವಡಿ, ಜುಬೇರ ಬಂಧಿತ ಆರೋಪಿಗಳು. ಇವರು ಬೈಕ್ ಮೇಲೆ ಕುಳಿತು ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು 236 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಈ ಕುರಿತು ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

