ಉಡುಪಿ: ನೌಕಾಪಡೆಯ ಹಡಗುಗಳ ರಹಸ್ಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ ಐದನೇ ಆರೋಪಿ ಪಶ್ಚಿಮ ಬಂಗಾಳದ ಜಾಲ್ ಫೈಗುರಿ ಜಿಲ್ಲೆಯ, ಪ್ರಸ್ತುತ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ನೆಲೆಸಿದ್ದ ಆಲಿಫ್ ಇಸ್ಲಾಮ್ (21) ಎಂಬಾತನನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಂಧಿತ ಬಾಂಗ್ಲಾದೇಶದ ಪ್ರಜೆಯಾಗಿರಬಹುದು ಎಂಬ ಶಂಕೆ ಇದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ತಿಳಿಸಿದ್ದಾರೆ. ಆರೋಪಿಗಳು ಹಡಗುಗಳಿಗೆ ಸಂಬಂಧಿತ ಗೋಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸಿರುವುದು ಈ ಹಿಂದೆ ದೃಢಪಟ್ಟಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

