Breaking News

ಜಮೀನು ವ್ಯಾಜ್ಯ – ಸಾರಿಗೆ ಬಸ್ ಚಾಲಕನನ್ನು ಕೊಲೆ ಮಾಡಿ ಸುಟ್ಟು ಹಾಕಿದ ದುರುಳರು.!

ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿ ಸಮೀಪ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿ ದೇಹವನ್ನು ಸುಟ್ಟು ಹಾಕಿರುವ ದಾರುಣ ಘಟನೆ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಆರ್.ಬಿ.ವೀರಣ್ಣ (58) ಎಂದು ಗುರುತಿಸಲಾಗಿದ್ದು, ಅವರು ಕೆಎಸ್‌ಆರ್‌ಟಿಸಿಯಲ್ಲಿ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ವೀರಣ್ಣ ಅವರ ದೇಹ ಸಂಪೂರ್ಣವಾಗಿ ಸುಟ್ಟು ಹೋಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಪೂರ್ವನಿಯೋಜಿತ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ, ಜಮೀನು ವಿವಾದವೇ ಈ ಕೊಲೆಗೆ ಕಾರಣವಾಗಿರಬಹುದು ಎನ್ನಲಾಗಿದೆ. ವೀರಣ್ಣ ಮತ್ತು ಅವರ ಸೋದರ ಸಂಬಂಧಿ ಕುಟುಂಬದವರ ನಡುವೆ ಸುಮಾರು 8 ಎಕರೆ ಜಮೀನಿನ ವಿಚಾರವಾಗಿ ಹಲವು ವರ್ಷಗಳಿಂದ ವಿವಾದ ನಡೆಯುತ್ತಿದ್ದು, ಈ ಪ್ರಕರಣದ ಸಂಬಂಧ ವೀರಣ್ಣ ಹಾಗೂ ಸೋದರ ಸಂಬಂಧಿಗಳು ನ್ಯಾಯಾಲಯದ ಮೆಟ್ಟಿಲು ಕೂಡ ಹತ್ತಿದ್ದರು. ಜಮೀನು ವಿಚಾರದ ಹಿನ್ನೆಲೆಯಲ್ಲೇ ಸಂಬಂಧಿಕರೇ ಕೊಲೆ ಮಾಡಿ ನಂತರ ಸಾಕ್ಷ್ಯ ನಾಶಪಡಿಸಲು ದೇಹವನ್ನು ಸುಟ್ಟು ಹಾಕಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಪ್ರಕರಣ ಆಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ್ದು, ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *