Breaking News

ವಜಾಗೊಳಿಸಿದ್ದ ಹೊರಗುತ್ತಿಗೆ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ

ಜಮಖಂಡಿ: ನಗರದ ಸರ್ಕಾರಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಸಿಬ್ಬಂದಿಯಲ್ಲಿ ನಾಲ್ವರನ್ನು ವಜಾಗೊಳಿಸಿದ ಹಿನ್ನೆಲೆ ಅವರು ಮೈ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ನಡೆದಿದ್ದು, ಪೊಲೀಸರು, ಜನತೆ ತಕ್ಷಣ ಅವರನ್ನು ತಡೆದು, ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಸ್ವಸ್ಥಗೊಂಡ ಸಿಬ್ಬಂದಿ ಯಮುನಾ ಗೋರ್ಪಡೆ, ಸುನಂದಾ ಮಠಪತಿ, ವಿಜಯ ಗೋರ್ಪಡೆ, ಹನುಮಂತ ಕಾಂಬಳೆ ಗುಣಮುಖರಾಗುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸರ್ಕಾರಿ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಏಜೆನ್ಸಿ ಮೂಲಕ ನೇಮಕವಾಗಿದ್ದ ಅವರನ್ನು ರೋಸ್ಟರ್ ನಿಯಮದ ಪ್ರಕಾರ ವಜಾಗೊಳಿಸಲಾಗಿತ್ತು. ಮರು ನೇಮಕ ಮಾಡಿಕೊಳ್ಳುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾಗ, ಸಿಬ್ಬಂದಿ ಆತ್ಮಹತ್ಯೆಗೆ ಮುಂದಾಗಿದ್ದರು. ಮಾಜಿ ಶಾಸಕ ಆನಂದ ನ್ಯಾಮಗೌಡ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿಬ್ಬಂದಿಯನ್ನು ಭೇಟಿಯಾಗಿ ಅವರ ಆರೋಗ್ಯ ವಿಚಾರಿಸಿ, ನೌಕರರ ಸಮಸ್ಯೆಗೆ ನ್ಯಾಯ ಸಮ್ಮತ ಪರಿಹಾರ ದೊರಕಿಸಿಕೊಡಲು ಪ್ರಯತ್ನಿಸುವುದಾಗಿ ಭರವಸೆ ನೀಡಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *