Breaking News

ವಿವಿಧ ಮಾದಕ ವಸ್ತುಗಳ ಮಾರಾಟ: ವಿದೇಶಿ ಡ್ರಗ್ ಪೆಡ್ಲರ್ ಬಂಧನ

ಬೆಂಗಳೂರು: ಹಲವಾರು ರೀತಿಯ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ವಿದೇಶಿ ಡ್ರಗ್ ಪೆಡ್ಲರ್‌ನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಸೆನೆಗಲ್ ಮೂಲದ ಬ್ಯಾರಿ ಯಾಯ ಅಲಿಯಾಸ್ ಒಕೊಲಿ ಬಂಧಿತನಾಗಿದ್ದು, ಆರೋಪಿಯಿಂದ ಬರೋಬ್ಬರಿ ಒಂದೂವರೆ ಕೋಟಿ ರೂಪಾಯಿ ಮೌಲ್ಯದ ವಿವಿಧ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತನಿಂದ 29 ಎಲ್‌ಎಸ್‌ಡಿ ಮಾತ್ರೆಗಳು, 27 ಎಲ್‌ಎಸ್‌ಡಿ ಸ್ಟ್ರಿಪ್ಸ್, 546 ಗ್ರಾಂ ಎಂಡಿಎಂಎ, 152 ಗ್ರಾಂ ಹೈಡ್ರೋ ಗಾಂಜಾ ಹಾಗೂ 131 ಗ್ರಾಂ ಕೊಕೇನ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಇದಕ್ಕೂ ಮುನ್ನವೂ ಬೆಂಗಳೂರಿನಲ್ಲಿ ಡ್ರಗ್ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದನು. ಆ ವೇಳೆ ಪೊಲೀಸರು ಆರೋಪಿಯನ್ನು ಗಡಿಪಾರು ಮಾಡಿದ್ದರು. ಆದರೆ, ಬಳಿಕ ಮತ್ತೊಂದು ಹೆಸರಿನಲ್ಲಿ ದಾಖಲೆಗಳನ್ನು ಮಾಡಿಸಿಕೊಂಡು ಮರುಬಾರಿಗೆ ಬೆಂಗಳೂರಿಗೆ ಬಂದಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ. ಸದ್ಯ ಆರೋಪಿ ಹೊಸ ದಾಖಲೆಗಳನ್ನು ಹೇಗೆ ಪಡೆದನು ಎಂಬುದರ ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *