Breaking News

ಬೆಳಗಾವಿಯಲ್ಲಿ ಭೀಕರ ರಸ್ತೆ ಅಪಘಾತ: ಇಡೀ ಕುಟುಂಬವೇ ದುರಂತ ಅಂತ್ಯ

ಜಮಖಂಡಿ- ಮಿರಜ್ ರಾಜ್ಯ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತದಲ್ಲಿ ಇಡೀ ಕುಟುಂಬ ದಾರುಣ ಅಂತ್ಯಕಂಡಿರುವ ಘಟನೆ ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದಲ್ಲಿ ನಡೆದಿದೆ. ಲಾರಿ ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿಯಾಗಿದ್ದು, ಬೈಕ್​​ನಲ್ಲಿದ್ದ ಗಂಡ, ಹೆಂಡ್ತಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೈಕ್ ನಲ್ಲಿದ್ದ ಗಿರೇಪ್ಪಾ ಕುಂದ್ರಾಳಿ, ಪತ್ನಿ ಮಂಜುಳಾ ಕುಂದ್ರಾಳಿ(27), ಮಗು ಆರಾಧ್ಯ ಕುಂದ್ರಾಳಿ(7) ಮೃತ ದುರ್ವೈವಿಗಳು. ಮೂವರು ಬೈಕ್ ಮೇಲೆ ಮಹಾರಾಷ್ಟ್ರದ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಗಿರೇಪ್ಪಾ, ಮಂಜುಳಾ ಹಾಗೂ ಆರಾಧ್ಯ ಒಂದೇ ಬೈಕ್​​ನಲ್ಲಿ ಮಿರಜ್ ನಿಂದ ಜಮಖಂಡಿಗೆ ಹೋಗುತ್ತಿದ್ದ ವೇಳೆ ಲಾರಿ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್​​ನಲ್ಲಿ ಗಂಡ-ಹೆಂಡ್ತಿ ಹಾಗೂ ಮಗಳು ಮೃತಪಟ್ಟಿದ್ದಾರೆ. ಇನ್ನು ಸ್ಥಳಕ್ಕೆ ಹಾರೂಗೇರಿ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *