Breaking News

ಗೋಡೆ ಮೇಲೆ ಮೂತ್ರ ವಿಸರ್ಜನೆ ಪ್ರಶ್ನಿಸಿದಕ್ಕೆ ವಕೀಲನ ಮೇಲೆ ಹಲ್ಲೆ ಮಾಡಿದ್ದ ಪೊಲೀಸ್ ವಶಕ್ಕೆ

ಬೆಂಗಳೂರು: ಗೋಡೆ ಮೇಲೆ ಮೂತ್ರ ವಿಸರ್ಜಿಸಿದ್ದನ್ನು ಪ್ರಶ್ನಿಸಿದ ವಕೀಲರೊಬ್ಬರ ಮೇಲೆ ಹಲ್ಲೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿದ ಆರೋಪದಲ್ಲಿ ಹೆಡ್ ಕಾನ್ಸ್ಟೇಬಲ್ ಒಬ್ಬರನ್ನು ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕೋರಮಂಗಲ ಪೊಲೀಸ್ ಠಾಣೆ ಹೆಡ್ ಕಾನ್ಸ್ಟೇಬಲ್ ಸತೀಶ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ. ಹಲ್ಲೆಗೊಳಗಾಗಿದ್ದ ಶಿವಾಜಿನಗರ ಇನ್ಫೆಂಟ್ರಿ ರಸ್ತೆ ನಿವಾಸಿ ಮತ್ತು ವಕೀಲ ಆದರ್ಶ್ ಗಂಗಲ(50) ನೀಡಿದ ದೂರಿನ ಅನ್ವಯ ತನಿಖೆ ಕೈಗೊಂಡು ಸತೀಶ್ ನನ್ನು ವಶಕ್ಕೆ ಪಡೆಯಲಾಗಿದೆ. ವಕೀಲ ಆದರ್ಶ್ ಗಂಗಲ ಚರ್ಚ್ ಸ್ಟ್ರೀಟ್ ಕಲ್ಟಕ್ ಆರ್ಕೇಡ್ ನ ನಾಲ್ಕನೇ ಮಹಡಿಯಲ್ಲಿ ಕಚೇರಿ ಹೊಂದಿದ್ದಾರೆ. ಫೆಬ್ರವರಿ 6ರಂದು ರಾತ್ರಿ 9 ಗಂಟೆಗೆ ಕೆಲಸ ಮುಗಿಸಿ ಮನೆಗೆ ಹೋಗಲು ಮೈನ್ ಗೇಟ್ ಬಳಿ ನಡೆದುಕೊಂಡು ಹೋಗುವಾಗ ವ್ಯಕ್ತಿ ಒಬ್ಬ ಕಟ್ಟಡ ಹಿಂಭಾಗದ ಗೋಡೆ ಮೇಲೆ ಮೂತ್ರ ವಿಸರ್ಜಿಸುವುದು ಕಂಡುಬಂದಿದೆ. ಇದು ಮೂತ್ರ ವಿಸರ್ಜನೆ ಸ್ಥಳವಲ್ಲ ಶೌಚಾಲಯದಲ್ಲಿ ಮೂತ್ರ ವಿಸರ್ಜನೆ ಮಾಡಿ ಎಂದು ಹೇಳಿದ್ದಾರೆ. ಮೂತ್ರ ವಿಸರ್ಜಿಸುತ್ತಿದ್ದ ವ್ಯಕ್ತಿಯ ಪಕ್ಕದಲ್ಲಿ ಬರುವ ವ್ಯಕ್ತಿಗಳು ಮದ್ಯ ಸೇವಿಸುತ್ತಿದ್ದರು. ಅವರು ಆದರ್ಶ್ ಮೇಲೆ ಹಲ್ಲೆ ಮಾಡಿ ಮೊಬೈಲ್ ಕಸಿದುಕೊಳ್ಳಲು ಪ್ರಯತ್ನಿಸಿ ಹೋಗದಂತೆ ಹಿಡಿದುಕೊಂಡಿದ್ದರು. ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಮುಖಕ್ಕೆ ಹೊಡೆದು ಕನ್ನಡಕ ಮುರಿದು ಹಾಕಿದ್ದರು.

Share News

About BigTv News

Check Also

ಸತ್ತ ಜಾನುವಾರುಗಳ ಪರಿಹಾರದ ಹಣ ನುಂಗಿದ ಪಾಪಿಗಳು : ರಾಬಕೋವಿ ಹಾಲು ಒಕ್ಕೂಟದ ಮತ್ತಷ್ಟು ಅಕ್ರಮ ಬಯಲು!

ಬಳ್ಳಾರಿ: ರಾಬಕೋವಿ ಹಾಲು ಒಕ್ಕೂಟದಲ್ಲಿ ಮೃತಪಟ್ಟ ಜಾನುವಾರುಗಳ ವಿಮಾ ಪರಿಹಾರದ ಹಣ ದುರುಪಯೋಗಪಡಿಸಿಕೊಂಡು ಕೋಟ್ಯಂತರ ರೂಪಾಯಿ ಅವ್ಯವಹಾರ ನಡೆಸಿರುವ ಗಂಭೀರ …

Leave a Reply

Your email address will not be published. Required fields are marked *