Breaking News

ಅಕ್ರಮ ಸಂಬಂಧ ತಂದ ಆಪತ್ತು : ಕೊಲೆಯಾಗಿ ಹೋದ ಅಂಕಲ್!

ಕೋಲಾರ: ಜಿಲ್ಲೆಯ ಮಾಲೂರು ತಾಲೂಕಿನ ಮಿಟಗಾನಹಳ್ಳಿ ಗ್ರಾಮದಲ್ಲಿ ಅಕ್ರಮ ಸಂಬಂಧದ ಅನುಮಾನ ಹಿನ್ನೆಲೆ ಭೀಕರ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಂದಿಗೆ ಮಾವನಿಗೆ ಅಕ್ರಮ ಸಂಬಂಧವಿದೆ ಎಂಬ ಶಂಕೆಯಿಂದ ಅಳಿಯನೇ ಮಾವನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿದ ಘಟನೆ ನಡೆದಿದೆ.ಮೃತ ವ್ಯಕ್ತಿಯನ್ನು ನಯಾಜ್ ಖಾನ್ (38) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಶಾಹಿದ್ ಖಾನ್ (33) ಎಂದು ಪೊಲೀಸರು ಗುರುತಿಸಿದ್ದಾರೆ. ಶಾಹಿದ್ ಖಾನ್, ಮೃತ ನಯಾಜ್ ಖಾನ್ ಅವರ ಸಹೋದರಿಯ ಪುತ್ರನಾಗಿದ್ದು, ಇಬ್ಬರೂ ಮಾವ-ಅಳಿಯ ಸಂಬಂಧ ಹೊಂದಿದ್ದರು. ಪೊಲೀಸರ ಪ್ರಾಥಮಿಕ ಮಾಹಿತಿ ಪ್ರಕಾರ, ಶಾಹಿದ್ ಖಾನ್ ತನ್ನ ಪತ್ನಿಯೊಂದಿಗೆ ನಯಾಜ್ ಖಾನ್ ಅಕ್ರಮ ಸಂಬಂಧ ಹೊಂದಿದ್ದಾನೆ ಎಂಬ ಅನುಮಾನದಿಂದ ಕಳೆದ ಕೆಲವು ದಿನಗಳಿಂದ ಆತಂಕದಲ್ಲಿದ್ದನು. ಈ ವಿಷಯಕ್ಕೆ ಸಂಬಂಧಿಸಿ ಕುಟುಂಬದೊಳಗೆ ಈಗಾಗಲೇ ಅಸಮಾಧಾನ ಹಾಗೂ ವಾಗ್ವಾದಗಳು ನಡೆದಿದ್ದವು ಎಂದು ತಿಳಿದುಬಂದಿದೆ. ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Share News

About BigTv News

Check Also

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ; ಕಾಮುಕನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಹಾಗೂ ₹50,000 ದಂಡ ವಿಧಿಸಿದ ಮಂಗಳೂರು ಕೋರ್ಟ್!

ಮಂಗಳೂರು: ಕಡಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 2021ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ …

Leave a Reply

Your email address will not be published. Required fields are marked *