ರಾಯಬಾಗ: ಬೈಕ್ ಮತ್ತು ಲಾರಿ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ನಲ್ಲಿದ್ದ ಒಂದೇ ಕುಟುಂಬದ ಮೂವರು ಬಲಿಯಾದ ಘಟನೆ ರಾಯಬಾಗ ತಾಲೂಕಿನ ಅಲಖನೂರ ಗ್ರಾಮದ ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಜೈಸಿಂಗ್‌ಪುರ ಮೂಲದ ಗಿರೇಪ್ಪ ಕುಂದ್ರಾಳಿ (38), ಇವರ ಪತ್ನಿ ಮಂಜುಳಾ (28) ಮತ್ತು 7 ವರ್ಷದ ಪುತ್ರಿ ಆರಾಧ್ಯ ಎಂದು ಗುರುತಿಸಲಾಗಿದೆ. ಕರ್ನಾಟಕ-ಮಹಾರಾಷ್ಟ್ರ ರಾಜ್ಯ ಹೆದ್ದಾರಿಯ ಕುಡಚಿ ಮತ್ತು ಹಾರೂಗೇರಿ ಕ್ರಾಸ್ ಮಧ್ಯೆ ಇರುವ ಅಲಖನೂರ ಗ್ರಾಮದ ಶ್ರೀ ಕರಿಸಿದ್ದೇಶ್ವರ ಮಹಾದ್ವಾರದ ಸಮೀಪವಿರುವ ಅಪಾಯಕಾರಿ ತಿರುವಿನಲ್ಲಿ ಟ್ರಕ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ. ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಸುದ್ದಿ ತಿಳಿಯುತ್ತಿದ್ದಂತೆ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಘಟನೆಗೆ ಸಂಬಂಧಿಸಿದಂತೆ ಟ್ರಕ್ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಸದ್ಯ ಲಾರಿ ಚಾಲಕನನ್ನು ವಶಕ್ಕೆ ಪಡೆದಿದ್ದು, ಹಾರುಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ
bigtvnews | Hubli Dharwad News | Kannada News | Karnataka News Hubli News | News In Hubli | Local news

