ಕೊಪ್ಪಳ: ಲಾರಿ ಓವರ್ ಟೇಕ್ ಮಾಡಲು ಹೋಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಉಪಲದಿನ್ನಿ ಗ್ರಾಮದಲ್ಲಿ ನಡೆದಿದೆ. ಬೈಕ್ ಸವಾರನ ನಿಯಂತ್ರಣ ತಪ್ಪಿ ಕೆಳೆಗೆ ಬಿದ್ದಿದ್ದು, ಲಾರಿ ಚಕ್ರದಡಿ ಸಿಲುಕಿ ಇಬ್ಬರೂ ಮೃತಪಟ್ಟಿದ್ದಾರೆ. ಶ್ರೀನಿವಾಸ್ (26) ಹಾಗೂ ಸಿದ್ದನಗೌಡ್ರ (25) ಮೃತ ದುರ್ದೈವಿಗಳು. ಸ್ಟೀಲ್ ಕಾಯಿಲ್ ಸಾಗಿಸುತ್ತಿದ್ದ ಲಾರಿಯ ಕೆಳಗೆ ಸಿಲುಕಿ ಮೃತಪಟ್ಟಿದ್ದಾರೆ. ಅಕ್ಕನ ಮಗಳ ಹುಟ್ಟುಹಬ್ಬಕ್ಕೆಂದು ಹೋಗುತ್ತಿದ್ದಾಗ ಈ ದುರಂತ ಸಂಭವಿಸಿದೆ. ಮೃತರು ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಮುಸಲಾಪುರ ಗ್ರಾಮದ ನಿವಾಸಿಗಳು. ಬೇವೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

