Breaking News

ಗದಗ: ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಕಾದಾಟ – ದೊಣ್ಣೆ ಹಿಡಿದು ಪರಸ್ಪರ ಹಲ್ಲೆ..

ಗದಗ ನಗರದ ನಂದೀಶ್ವರ ನಗರದಲ್ಲಿ ಮನೆ ಪಕ್ಕದ ಜಾಗದ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದ ಘಟನೆ ಬೆಳಕಿಗೆ ಬಂದಿದೆ. ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಮಾತಿನ ಚಕಮಕಿ ಬಳಿಕ ಗಲಾಟೆ ತೀವ್ರ ಸ್ವರೂಪ ಪಡೆದುಕೊಂಡಿದ್ದು, ದೊಣ್ಣೆ ಹಿಡಿದು ಪರಸ್ಪರ ಹಲ್ಲೆ ನಡೆಸಿದ ಆರೋಪ ಕೇಳಿಬಂದಿದೆ. ಭೀಮಪ್ಪ ಜಗ್ಗಲ್ ಅವರ ಕುಟುಂಬದ ಮೇಲೆ ಕುಮಾ‌ರ್ ಮಿರ್ಚಿ ಹಲ್ಲೆ ನಡೆಸಿದರೆಂಬ ಆರೋಪವೂ ಎದುರಾಗಿದೆ. ಘಟನೆಯಿಂದ ಸ್ಥಳದಲ್ಲಿ ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ಮಧ್ಯ ಪ್ರವೇಶಿಸಿ ಜಗಳ ನಿಲ್ಲಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎನ್ನಲಾಗಿದೆ. ಈ ಕುರಿತು ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *