Breaking News

ಅಡ್ಯನಡ್ಕ: ಬೇಕರಿಯಲ್ಲಿ ಜೂಜಿನಲ್ಲಿ ತೊಡಗಿದ್ದ ಆರೋಪಿ ಬಂಧನ

ವಿಟ್ಲ: ಬೇಕರಿಯೊಂದರಲ್ಲಿ ಮಟ್ಕಾ ಆಟ ಆಡುತ್ತಿದ್ದ ಮಾಹಿತಿ ಪಡೆದ ವಿಟ್ಲ ಪೊಲೀಸರು ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಠಾಣೆಯ ಉಪನಿರೀಕ್ಷಕ ರಾಮಕೃಷ್ಣ ಅವರು ಪೊಲೀಸರೊಂದಿಗೆ ಫೆ.14ರಂದು ಪೇಟೆಯಲ್ಲಿ ಕರ್ತವ್ಯದಲ್ಲಿ ಇದ್ದಾಗ ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದ ವಿನಾಯಕ ಬೇಕರಿಯಲ್ಲಿ ಅಂಗಡಿ ಮಾಲಕ ಕುದ್ದುಪದವು ನಿವಾಸಿ ರವೀಶ್ ಎಂಬಾತ ಅದೃಷ್ಟದ ಮಟ್ಕಾ ಜೂಜಾಟವನ್ನು ಮೊಬೈಲ್ ಮೂಲಕ ಆಡಿಸುತ್ತಿದ್ದ ಎಂಬ ಮಾಹಿತಿ ಲಭ್ಯವಾಗಿತ್ತು. ಅಲ್ಲಿ ಮಟ್ಕಾ ಆಟ ಆಡಿಸುತ್ತಿದ್ದಆರೋಪಿ ರವೀಶ್‌ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ತಾನು ಮಟ್ಕಾ ಆಟ ಅಡಿಸುತ್ತಿದುದ್ದನ್ನು ಆರೋಪಿ ರವೀಶ್ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದು, ಆತನ ಮೊಬೈಲ್, ನಗದು 1630 /- ರೂಪಾಯಿ ಮತ್ತು ಇತರ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *