Breaking News

ದಾವಣಗೆರೆ: 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

ನ್ಯಾಯಾಲಯದಲ್ಲಿ ನಡೆಯುತ್ತಿದ್ದ ವಿಚಾರಣೆಗೆ ಹಾಜರಾಗದೇ 12 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹರಿಹರ ನಗರ ಠಾಣೆಯ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಹರಿಹರದ ಗಾಂಧಿ ನಗರದ ಶೌಕತ್‌ ಅಲಿ (50) ಬಂಧಿತ ಆರೋಪಿ. ಹರಿಹರ ನಗರ ಠಾಣೆಯಲ್ಲಿ 2014, 2015 ಹಾಗೂ 2016ರಲ್ಲಿ ಆರೋಪಿ ವಿರುದ್ಧ 5 ಪ್ರಕರಣಗಳು ದಾಖಲಾಗಿದ್ದವು.ಈ ಎಲ್ಲ ಪ್ರಕರಣಗಳ ವಿಚಾರಣೆ ನ್ಯಾಯಾಲಯದಲ್ಲಿ ನಡೆಯುತ್ತಿದೆ. ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಶೌಕತ್‌ ಅಲಿ ಪತ್ತೆಗೆ ಪೊಲೀಸ್‌ ವರಿಷ್ಠಾಧಿಕಾರಿ ಎಚ್‌.ಟಿ. ಶೇಖರ್‌ ಸೂಚಿಸಿದ್ದರು. ಹರಿಹರ ನಗರ ಠಾಣೆಯ ಇನ್‌ಸ್ಪೆಕ್ಟರ್‌ ಆರ್‌.ಎಫ್‌. ದೇಸಾಯಿ ನೇತೃತ್ವದ ತಂಡ ಆರೋಪಿಯನ್ನು ತುಮಕೂರು ರೈಲ್ವೆ ನಿಲ್ದಾಣದ ಬಳಿ ಪತ್ತೆ ಮಾಡಿ ಬಂಧಿಸಿದೆ.

Share News

About BigTv News

Check Also

ಮಸೀದಿ ಮುಂದೆ ಗಣೇಶನ ಮೂರ್ತಿ ಹೋದ್ರೆ ಗ್ರಹಚಾರ ಬಿಡಿಸ್ತೀನಿ” ; ಇನ್‌ಸ್ಪೆಕ್ಟರ್ ಧಮ್ಕಿ

ಮೈಸೂರು: ಗಣೇಶೋತ್ಸವದ ವೇಳೆ ಮೆರವಣಿಗೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಟಿ. ನರಸೀಪುರ ಇನ್ಸ್‌ಪೆಕ್ಟರ್ ಧನಂಜಯ ನೀಡಿರುವ ಎಚ್ಚರಿಕೆ ಚರ್ಚೆಗೆ ಕಾರಣವಾಗಿದೆ. …

Leave a Reply

Your email address will not be published. Required fields are marked *