Breaking News

ಸಿಗರೇಟ್‌ ಕಿಡಿಗೆ ಬಸ್‌ ಬೆಂಕಿಗಾಹುತಿ: ನಶೆಯಲ್ಲಿ ಕಿಡಿಗೇಡಿಗಳ ಕೃತ್ಯ!

ಬೆಂಗಳೂರು: ನಗರದ ಚಂದ್ರಾಲೇಔಟ್ ನ ಬಿಎಂಟಿಸಿ ಡಿಪೋ ಬಳಿ ಖಾಸಗಿ ಬಸ್ಸೊಂದು ಬೆಂಕಿಗೆ ಆಹುತಿ ಯಾಗಿದೆ. ಬಸ್‌ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಬಸ್‌ನಲ್ಲಿ ಯಾವುದೇ ಪ್ರಯಾಣಿಕರು ಇಲ್ಲದಿರುವ ಕಾರಣ ಪ್ರಾಣ ಹಾನಿ ಸಂಭವಿಸಿಲ್ಲ. ಬೆಂಕಿಯ ಜ್ವಾಲೆ ಬಸ್‌ನ ಅಕ್ಕಪಕ್ಕ ನಿಲುಗಡೆ ಮಾಡಿದ್ದ ಇತರೆ ವಾಹನ ಗಳಿಗೂ ಹಬ್ಬಿ ಹಾನಿಯಾಗಿದೆ.ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ. ಕಿಡಿಗೇಡಿಗಳು ಮದ್ಯದ ನಶೆಯಲ್ಲಿ ಸಿಗರೆಟ್‌ ತುಂಡನ್ನು ಬಸ್‌ ಮೇಲೆ ಎಸೆದಿದ್ದರಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಬಸ್‌ ನಿಲ್ದಾಣದಲ್ಲಿ ಇಬ್ಬರು ಓಡಾಟ ನಡೆಸುತ್ತಿದ್ದರು. ಅವರೇ ಕೃತ್ಯ ಎಸಗಿರುವ ಸಾಧ್ಯತೆಯಿದೆ. ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾದ ದೃಶ್ಯಾವಳಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪೊಲೀಸರು ಹೇಳಿದರು.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *