Breaking News

ಮಂಗಳೂರಿನಲ್ಲಿ ಘೋರ ದುರಂತ: ಬಾಲ್ ಎಂದು ಬಾಂಬ್​​​​​ನಿಂದ ಬೌಲಿಂಗ್: ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್

ಚೆಂಡಿನ ಆಕಾರದ ವಸ್ತು ಸ್ಫೋಟಗೊಂಡು ಓರ್ವ ಬಾಲಕನಿಗೆ ಗಾಯವಾಗಿರುವಂತಹ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ‌ ಬಂದಾರು ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಅಭೀಶ್​ ಎಂಬ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ. ಸದ್ಯ ಬಾಲಕ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ 9(B), 1(b) ಸ್ಫೋಟಕಗಳ ಕಾಯ್ದೆ, 125 A BNS ಆಕ್ಟ್ ಅಡಿ ಪ್ರಕರಣ ದಾಖಲಾಗಿದೆ. ಬಾಲಕ ಅಭೀಶ್ ಮನೆ ಅಂಗಳದಲ್ಲಿ ಆಟ ಆಡುತ್ತಿದ್ದ. ಈ ವೇಳೆ ಚೆಂಡಿನಾಕಾರದ ವಸ್ತು ಪತ್ತೆಯಾಗಿದೆ. ಬಾಲ್ ರೀತಿ ಇದ್ದ ಬಾಂಬ್​​ನಿಂದ ಮಕ್ಕಳು ಕ್ರಿಕೆಟ್ ಆಡಿದ್ದಾರೆ. ಓರ್ವ ಬಾಲಕ ಪತ್ತೆಯಾದ ಚೆಂಡಿನಾಕಾರದ ವಸ್ತುವನ್ನು ಬೌಲ್ ಮಾಡಿದ್ದು, ಅಭೀಶ್ ಬ್ಯಾಟ್​ನಿಂದ ಹೊಡೆದಾಗ ಬ್ಲಾಸ್ಟ್ ಆಗಿದೆ. ಈ ವೇಳೆ ಅಭೀಶ್​ಗೆ ಸಣ್ಣಪುಟ್ಟ ಗಾಯಗಳಾಗಿವೆ. ಕಾಡು ಹಂದಿ ಬೇಟೆ ಆಡಲು ಇಟ್ಟಿದ್ದ ಬಾಂಬ್​ ಎಂದು ಶಂಕಿಸಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *