Breaking News

ಮಂಡ್ಯದಲ್ಲಿ ರೈಲಿಗೆ ತಲೆಕೊಟ್ಟು ಮನ್ ಮುಲ್ ಅಧಿಕಾರಿ ಆತ್ಮಹತ್ಯೆ

ಮಂಡ್ಯ : ಮದ್ದೂರು ತಾಲೂಕಿನ ಮನ್ ಮುಲ್ ಮೇಗಾ ಡೈರಿಯ ಉಪ ವ್ಯವಸ್ಥಾಪಕರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಗುರುವಾರ ಸಂಜೆ ಜರುಗಿದೆ. ಮೇಗಾ ಡೈರಿಯ ಹಾಲು ಶೇಖರಣಾ ವಿಭಾಗದ ಉಪ ವ್ಯವಸ್ಥಾಪಕ ಭರತ್ ರಾಜ್ ಆತ್ಮಹತ್ಯೆ ಮಾಡಿಕೊಂಡಿರುವ ಅಧಿಕಾರಿಯಾಗಿದ್ದಾರೆ. ಗುರುವಾರ ಸಂಜೆ 4 ರಿಂದ 5 ಗಂಟೆಯೊಳಗೆ ಮಂಡ್ಯ ನಗರದ ಸಕ್ಕರೆ ಕಾರ್ಖಾನೆ ಬಳಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು, ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದು ಬಂದಿಲ್ಲ. ಶವವನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ಮಂಡ್ಯ ರೈಲ್ವೆ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *