Breaking News

ಕಡಬ ಕುಟ್ರುಪಾಡಿಯ ಯುವಕ ಐರ್ಲೆಂಡ್‌ನಲ್ಲಿ ನಿಗೂಢ ಸಾವು

ಉಪ್ಪಿನಂಗಡಿ: ಐರ್ಲೆಂಡ್‌ನಲ್ಲಿ ಉದ್ಯೋಗದಲ್ಲಿದ್ದ ಕಡಬ ತಾಲ್ಲೂಕಿನ ಕುಟ್ರುಪಾಡಿ ವಿಮಲಗಿರಿಯ ಸಾಂಜೊ ಸುನಿಲ್ (31) ಅಲ್ಲಿ ತನ್ನ ಮನೆಯಲ್ಲಿ ನಿಗೂಢವಾಗಿ ಮೃತಪಟ್ಟಿದ್ದಾರೆ. ‘ಐರ್ಲೆಂಡ್‌ನ ಡಬ್ಲಿನ್ ನಗರದ ಫಿಂಗ್ಲಾಸ್‌ ಚಾರ್ಲ್ಸ್‌ಟೌನ್‌ ಪ್ರದೇಶದಲ್ಲಿ ಅವರು ವಾಸವಾಗಿದ್ದರು. ಸಾಂಜೊ ಸುನಿಲ್ ವಾಸವಿದ್ದ ಮನೆಯಲ್ಲಿ ಗುರುವಾರ ಬೆಳಿಗ್ಗೆ ಅವರ ಮೃತದೇಹ ಪತ್ತೆಯಾಗಿದೆ ಎಂಬ ಮಾಹಿತಿ ಸಿಕ್ಕಿದೆ’ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಐರಿಷ್‌ ಪೊಲೀಸರು ಪ್ರಾಥಮಿಕ ತನಿಖೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ಕಂಡುಬಂದಿದೆ. ತನಿಖೆ ಆರಂಭಿಸಲಾಗಿದೆ ಎಂದು ಅಲ್ಲಿನ ಪೊಲೀಸರು ಕುಟುಂಬದವರಿಗೆ ಮಾಹಿತಿ ನೀಡಿದ್ದಾರೆ ಎಂದು ಗೊತ್ತಾಗಿದೆ. ಮೃತರಿಗೆ ಪತ್ನಿ, ತಂದೆ, ತಾಯಿ, ಇಬ್ಬರು ಸಹೋದರರು ಇದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *