Breaking News

ದಾವಣಗೆರೆಯಲ್ಲಿ ಭೀಕರ ಅಪಘಾತ : ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರ ಗಾಯ!

ದಾವಣಗೆರೆಯಲ್ಲಿ ಭೀಖರವಾದ ಅಪಘಾತ ಸಂಭವಿಸಿದ್ದು, ಚಾಲಕನ ನಿಯಂತ್ರಣ ತಪ್ಪಿ ಟಿಟಿ ವಾಹನ ಪಲ್ಟಿಯಾಗಿ 13 ಜನರಿಗೆ ಗಂಭೀರವಾದ ಗಾಯಗಳಾಗಿರುವ ಘಟನೆ ದಾವಣಗೆರೆ ತಾಲೂಕಿನ ಹೆಬ್ಬಾಳ ಬಳಿಯ ಟೋಲ್ ಗೇಟ್ ಬಳಿ ಈ ಒಂದು ಅಪಘಾತ ಸಂಭವಿಸಿದೆ. ಟಿಟಿ ವಾಹನದಲ್ಲಿ ಸಿಲುಕಿಕೊಂಡ ಚಾಲಕನನ್ನು ರಕ್ಷಣೆ ಮಾಡಲಾಗಿದ್ದು ಯಂತ್ರದ ಮೂಲಕ ವಾಹನ ಬಿಡಿವಾದ ಕತ್ತರಿಸಿ ಚಾಲಕನನ್ನ ರಕ್ಷಣೆ ಮಾಡಲಾಗಿದೆ. ಬೆಂಗಳೂರಿನಿಂದ ಟಿಟಿ ವಾಹನದಲ್ಲಿ ದಾಂಡೇಲಿ ಗೆ ಹೋಗುತ್ತಿದ್ದರು. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಾಹನ ಪಲ್ಟಿಯಾಗಿದೆ. ಗಂಭೀರವಾಗಿ ಗಾಯಗೊಂಡ ಚಾಲಕನನ್ನು ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ದಾವಣಗೆರೆ ಗ್ರಾಮದ ಪೊಲೀಸ್ ಠಾಣೆಯಲ್ಲಿ ಅಪಘಾತದ ಕುರಿತು ಪ್ರಕರಣ ದಾಖಲಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *