ನಗರದ ತರಕಾರಿ ಮಾರುಕಟ್ಟೆ ಬಳಿ ಶುಕ್ರವಾರ ಮಧ್ಯಾಹ್ನ ಕಲ್ಲು ತೂರಾಟ ಮಾಡಲಾಗಿದೆ. ರಾಜ್ಯಸಭೆ ಸದಸ್ಯ ನಾರಾಯಣ ಭಾಂಡಗೆ, ಕುಮಾರಸ್ವಾಮಿ ಹಿರೇಮಠ ಮತ್ತಿತರರ ಮುಖಂಡತ್ವದಲ್ಲಿ ಸಭೆ ನಡೆದಿತ್ತು. ಸಭೆ ಮುಗಿಸಿಕೊಂಡ ಯುವಕರ ದಂಡು ತರಕಾರಿ ಮಾರುಕಟ್ಟೆಯತ್ತ ಬಂದಿತು.ಆ ವೇಳೆ ಕಲ್ಲು ತೂರಾಟ ನಡೆದಿದೆ. ಕಲ್ಲು ತೂರಾಟ ಮಾಡಿದ ಯುವಕರನ್ನು ಚದರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಮಾಡಿದ್ದಾರೆ. ತರಕಾರಿ ಮಾರುಕಟ್ಟೆ ಸುತ್ತಮುತ್ತಲಿನ ಪ್ರದೇಶದಲ್ಲಿ ಅಂಗಡಿಗಳು ಬಂದ್ ಆಗಿದ್ದವು. ಗುರುವಾರ ರಾತ್ರಿ ಶಿವಾಜಿ ಜಯಂತಿ ಮೆರವಣಿಗೆ ತೆರಳುವ ವೇಳೆ ಪಂಕಾ ಮಸೀದಿ ಬಳಿ ಕಲ್ಲು ತೂರಾಟ ನಡೆದಿತ್ತು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಢ ಸಿದ್ದಾರ್ಥ ಗೋಯಲ್ ಅವರ ತಲೆಗೆ ಗಾಯವಾಗಿತ್ತು. ನಗರದಲ್ಲಿ ಬಿಗುವಿನ ವಾತಾವರಣವಿದೆ. ಇಂದಿನಿಂದ ಫೆ.24ರವರೆಗೆ ನಿಷೇಧಾಜ್ಞೆ ವಿಧಿಸಿದ್ದರೂ, ಯುವಕರು ಗುಂಪಾಗಿ ತಿರುಗಾಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

