Breaking News

ಗಂಡನ ಗೆಳೆಯನಿಂದಲೇ ಮೂರು ಮಕ್ಕಳ ತಾಯಿ ಮೇಲೆ ಅತ್ಯಾಚಾರ; 5 ಲಕ್ಷ ಹಣಕ್ಕೆ ಡಿಮ್ಯಾಂಡ್

ಬಿಹಾರ ಮೂಲದ ಮೂರು ಮಕ್ಕಳ ತಾಯಿ ಮೇಲೆ ಆಕೆಯ ಗಂಡನ ಗೆಳೆಯನಿಂದಲೇ ಆತ್ಯಾಚಾರ ನಡೆದಿರುವ ಘಟನೆ ಬೆಂಗಳೂರಿನ ಗೋವಿಂದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಮೊಹಮ್ಮದ್ ಜಹಾಂಗೀರ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿ ಜಹಾಂಗೀರ್ ಬೈರನಕುಂಟೆಯ ನಿವಾಸಿಯಾಗಿದ್ದಾನೆ. 20ನೇ ನವೆಂಬರ್ 2023ರಂದು ಮಹಿಳೆ ಒಂಟಿಯಾಗಿದ್ದಾಗ ಬಂದ ಆರೋಪಿ ಜಹಾಂಗೀರ್ ಅತ್ಯಾಚಾರಗೈದು ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾನೆ. ಈ ವಿಷಯ ಯಾರಿಗಾದ್ರೂ ಹೇಳಿದ್ರೆ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡೋದಾಗಿ ಹೇಳಿದ್ದಾನೆ. ಈ ಘಟನೆ ಬಳಿಕ ಮಕ್ಕಳ ಅನಾರೋಗ್ಯದ ಹಿನ್ನೆಲೆ ಮಹಿಳೆ ಬಿಹಾರಕ್ಕೆ ತೆರಳಿದ್ದರು. ಇತ್ತೀಚೆಗಷ್ಟೇ ಮಹಿಳೆ ಮಕ್ಕಳೊಂದಿಗೆ ಬೆಂಗಳೂರಿಗೆ ಹಿಂದಿರುಗಿದ್ದಳು. ಫೆಬ್ರವರಿ 10ರಂದು ಮಹಿಳೆ ಮುಂದೆ ಪ್ರತ್ಯಕ್ಷನಾದ ಜಹಾಂಗೀರ್, ಮತ್ತೆ ಲೈಂಗಿಕಕ್ರಿಯೆಗೆ ಒತ್ತಾಯಿಸಿದ್ದಾನೆ. ಮಹಿಳೆ ವಿರೋಧ ವ್ಯಕ್ತಪಡಿಸಿದಾಗ ಆರೋಪಿ ಜಹಾಂಗೀರ್ 5 ಲಕ್ಷ ರೂಪಾಯಿ ನೀಡುವಂತೆ ಬೆದರಿಕೆ ಹಾಕಿದ್ದಾನೆ. ಇದೇ ವೇಳೆ ಬಂದ ಮಹಿಳೆ ಗಂಡ ಪತ್ನಿಯನ್ನು ರಕ್ಷಣೆ ಮಾಡಿದ್ದಾನೆ. ನಂತರ ಗೋವಿಂದಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಸಂತ್ರಸ್ತೆ ದೂರಿನ ಮೇರೆ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *