ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಕೊಳಗಿ ಅರಣ್ಯದಲ್ಲಿ ರುಂಡವಿಲ್ಲದ ಮಹಿಳೆಯ ಬೆತ್ತಲೆ ಮೃತದೇಹ ಪತ್ತೆಯಾಗಿದ್ದು, ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಇಂದು (ಫೆಬ್ರವರಿ 20) ಸಂಜೆ ವೇಳೆ ರುಂಡವಿಲ್ಲದ ಮಹಿಳೆಯ ಮೃತದೇಹ ಪತ್ತೆ ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಮುಂಡಗೋಡು ಪೊಲೀಸರು ದೌಡಾಯಿಸಿದ್ದಾರೆ. ಎರಡು ದಿನದ ಹಿಂದೆ ಅತ್ಯಾಚಾರ ಮಾಡಿ ಬಳಿಕ ಹತ್ಯೆ ಮಾಡಿ ಮೃತದೇಹವನ್ನು ಅರಣ್ಯದಲ್ಲಿ ಎಸೆದು ಹೋಗಿರುವ ಶಂಕೆ ವ್ಯಕ್ತವಾಗಿದ್ದು, ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಾಗಳಲ್ಲಿ ತನಿಖೆ ನಡೆಸಿದ್ದಾರೆ. ಇನ್ನು ರುಂಡವಿಲ್ಲದ ಕಾರಣ ಮಹಿಳೆಯ ಗುರುತು ಪತ್ತೆಯಾಗಿಲ್ಲ. ರುಂಡವನ್ನು ಮೃತದೇಹದ ಸುತ್ತಮುತ್ತ ಬಿಸಾಡಿರಬಹುದುದೆಂದು ಪೊಲೀಸರು ಹುಡುಕಾಟ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

