Breaking News

ರಸ್ತೆ ಪಕ್ಕದ ಜೋಳದ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

ಬೆಳಗಾವಿ: ರಾಜ್ಯದಲ್ಲಿ ಸಾಲು ಸಾಲು ಅಪರಾಧ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಂಗೊಳ್ಳಿಗೆ ಹೋಗುವ ಮಾರ್ಗದಲ್ಲಿ ರಸ್ತೆ ಬದಿಯ ಜೋಳದ ಜಮೀನಿನಲ್ಲಿ ವ್ಯಕ್ತಿಯ ಅಪರಿಚಿತ ಶವ ಪತ್ತೆಯಾಗಿದೆ. ಕಿತ್ತೂರು ಪಟ್ಟಣದಿಂದ ಸಂಗೊಳ್ಳಿಗೆ ಹೋಗುವ ಮಾರ್ಗ ಮಧ್ಯೆ ಈ ಘಟನೆ ನಡೆದಿದೆ. ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು, ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ವ್ಯಕ್ತಿ 45 ವರ್ಷದ ವ್ಯಕ್ತಿ ಎಂದು ಗುರುತಿಸಲಾಗಿದೆ. ಐದಾರು ದಿನಗಳ ಹಿಂದೆಯೆ ವ್ಯಕ್ತಿಯನ್ನು ಕೊಲೆಗೈದು ಗೋವಿನ ಜೋಳದ ಜಮೀನಿನಲ್ಲಿ ಎಸೆದು ಹೋಗಿರಬಹುದು ಪೊಲೀಸರು ಎಂದು ಶಂಕಿಸಿದ್ದಾರೆ. ಘಟನಾ ಸ್ಥಳಕ್ಕೆ ಬೆಳಗಾವಿ ಜಿಲ್ಲಾ ವರಿಷ್ಠಾಧಿಕಾರಿ ಕೆ. ರಾಮರಾಜನ್, ಸಿಪಿಐ ಶಿವಾನಂದ ಗುಡಗನಟ್ಟಿ, ಪಿಎಸ್‌ಐ ಪ್ರವೀಣ ಗಂಗೊಳ್ಳಿ, ಜಿ.ಜಿ. ಹಂಪಣ್ಣವರ ಹಾಗೂ ಸೋಕೋ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *