ದೇವನಹಳ್ಳಿ: ಹಳೆ ವೈಷಮ್ಯದ ಹಿನ್ನೆಲೆ ನಡೆದ ಗಲಾಟೆಯಲ್ಲಿ ಮಹಿಳೆ ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮದಲ್ಲಿ ನಡೆದಿದೆ. ರೇಣುಕಾ (37) ಮೃತ ಮಹಿಳೆಯಾಗಿದ್ದಾರೆ. ಆರೋಪಿ ರಂಜಿತ್ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ಪೋಷಕರನ್ನು ಕೇಳಿದ್ದನು.ಆದರೆ ಬಾಲಕಿ ಇನ್ನೂ 18 ವರ್ಷ ಪೂರೈಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಪೋಷಕರು ವಿರೋಧ ವ್ಯಕ್ತಪಡಿಸಿ, ರಂಜಿತ್ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಾಗಿದ ನಂತರ ರಂಜಿತ್ ಜೈಲಿಗೆ ಹೋಗಿ, ಬಳಿಕ ಜಾಮೀನು ಪಡೆದು ಹೊರಬಂದಿದ್ದನು. ಜಾಮೀನು ಬಳಿಕವೂ ದ್ವೇಷ ಸಾಧಿಸುತ್ತಿದ್ದನೆಂದು ಆರೋಪಿಸಲಾಗಿದೆ. ನಿನ್ನೆ ರಾತ್ರಿ ರಂಜಿತ್ ಹಾಗೂ ಅವನ ಕುಟುಂಬಸ್ಥರು ಬಾಲಕಿಯ ತಾಯಿ ರೇಣುಕಾ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಎದೆ ಭಾಗಕ್ಕೆ ಗುದ್ದಿ ಮನಸೋ ಇಚ್ಛೆ ಹಲ್ಲೆ ಮಾಡಿರುವುದಾಗಿ ತಿಳಿದುಬಂದಿದೆ. ಮತ್ತಷ್ಟು ಪ್ರಚೋದನೆ ನೀಡಿದ ಸಂಬಂಧಿ ಸೇರಿ ನಾಲ್ವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ತೀವ್ರವಾಗಿ ಗಾಯಗೊಂಡ ರೇಣುಕಾರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇನ್ನೂ ಆಸ್ಪತ್ರೆ ಮುಂದೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸೂಕ್ತ ನ್ಯಾಯಕ್ಕಾಗಿ ರೇಣುಕಾ ಪೋಷಕರು ಕಣ್ಣೀರಿಟ್ಟಿದ್ದಾರೆ. ಈ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

