Breaking News

ದೇವನಹಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ; ಬೈಕ್ ಸವಾರ ಸಾವು

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ದಾಬಸ್ ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೋರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಡಿಯೋ ಮತ್ತು ಸ್ಪ್ಲೆಂಡರ್ ಪ್ಲಸ್ ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಡಿಕ್ಕಿಯ ತೀವ್ರತೆಗೆ ಎರಡು ಬೈಕ್‌ಗಳು ಸಂಪೂರ್ಣವಾಗಿ ನಜ್ಜುಗುಜ್ಜಾಗಿವೆ. ಅಪಘಾತದಲ್ಲಿ ನರಸಿಂಹಪ್ಪ ಎಂಬುವವರು ಸಾವನ್ನಪ್ಪಿರುವುದು ದೃಢಪಟ್ಟಿದೆ. ಮೃತ ನರಸಿಂಹಪ್ಪ ಅವರು ಮದುವೆ ಸಮಾರಂಭ ಮುಗಿಸಿಕೊಂಡು ಮನೆಗೆ ವಾಪಸ್ಸಾಗುತ್ತಿದ್ದ ವೇಳೆ, ದೇವನಹಳ್ಳಿಯ ಚಪ್ಪರದಕಲ್ಲು ಸಮೀಪ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ಅಪಘಾತದ ದೃಶ್ಯ ರಾಷ್ಟ್ರೀಯ ಹೆದ್ದಾರಿಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದ್ದು, ಪ್ರಕರಣ ಸಂಬಂಧ ವಿಶ್ವನಾಥಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಘಟನೆಯ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *