ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ಪಟ್ರೆಹಳ್ಳಿ ಬಳಿ ಇರುವ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ರಸ್ತೆಬದಿ ನಿಂತಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೋವಾ ಕಾರು ದೋಷಗೊಂಡ ಹಿನ್ನೆಲೆಯಲ್ಲಿ ನಾಲ್ವರು ರಸ್ತೆಬದಿ ನಿಂತು ರಿಪೇರಿ ಕಾರ್ಯದಲ್ಲಿ ತೊಡಗಿಕೊಂಡಿದ್ದರು. ಈ ವೇಳೆ ವೇಗವಾಗಿ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆ ಬಳಿಕ ಅಪರಿಚಿತ ವಾಹನದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಗಾಯಾಳುಗಳನ್ನು ತಕ್ಷಣವೇ ಹಿರಿಯೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಈವರೆಗೆ ಪತ್ತೆಯಾಗಿಲ್ಲ. ಈ ಕುರಿತು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾದ ವಾಹನ ಹಾಗೂ ಚಾಲಕನ ಪತ್ತೆಗೆ ಪೊಲೀಸರು ಶೋಧ ಕಾರ್ಯಾಚರಣೆ ಆರಂಭಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

