Breaking News

ಬೆಳಗಾವಿಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ವ್ಯಕ್ತಿಯ ಕೊಂದು, ಮರ್ಮಾಂಗ ಕತ್ತರಿಸಿದ ದುಷ್ಕರ್ಮಿಗಳು!

ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹಿರೇನಂದಿಹಳ್ಳಿ ಗ್ರಾಮದ ಬಳಿ ಮೆಕ್ಕೆಜೋಳ ಗದ್ದೆಯಲ್ಲಿ ಕಲ್ಮೇಶ್ ಕೋಟಿ (50) ಭೀಕರವಾಗಿ ಕೊಲೆಯಾಗಿದ್ದಾರೆ. ಕಲ್ಮೇಶ ಹತ್ಯೆಯ ಬಳಿಕ ಮರ್ಮಾಂಗ ಕತ್ತರಿಸಿರುವ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದಾರೆ. ತುಮಕೂರಿನಲ್ಲಿ ಹೋಂ ಕೇರ್ ನಲ್ಲಿ ಕಲ್ಮೇಶ್ ಕೋಟಿ ಕೆಲಸ ಮಾಡುತ್ತಿದ್ದರು. ಹತ್ತು ದಿನಗಳ ಹಿಂದೆ ಅಷ್ಟೇ ಕಲ್ಮೇಶ್ ಗ್ರಾಮಕ್ಕೆ ಬಂದಿದ್ದರು. ಕೊಲೆಯಾದ ಕಲ್ಮೇಶ್ ಕೋಟಿ ವಿರುದ್ಧ ತಾಯಿಯೊಂದಿಗೆ ವಾಸವಿದ್ದ. 10 ವರ್ಷಗಳ ಹಿಂದೆ ಕಲ್ಮೇಶ್ ಪತ್ನಿ ಕೂಡ ಬಿಟ್ಟು ಹೋಗಿದ್ದಳು. ಕೊಲೆ ವಿಚಾರ ತಿಳಿದು ಗ್ರಾಮಕ್ಕೆ ಪತ್ನಿ ಹಾಗೂ ಮಗ ಆಗಮಿಸಿದ್ದಾರೆ. ಘಟನೆಯಿಂದ ಹಿರೇನಂದಿಹಳ್ಳಿ ಗ್ರಾಮಸ್ಥರು ಬೆಚ್ಚಿಬಿದ್ದಿದ್ದಾರೆ. ಸ್ಥಳಕ್ಕೆ ಎಸ್ ಪಿ ರಾಮರಾಜನ್ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಣಕಾಸು, ಆಸ್ತಿ ಹಾಗೂ ಹೆಣ್ಣಿನ ವಿಚಾರವಾಗಿ ಮೂರು ಆಯಾಮದಲ್ಲಿ ತೆನೆಗೆ ನಡೆಸುತ್ತಿದ್ದಾರೆ. ನಾಲ್ಕು ದಿನಗಳ ಹಿಂದೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ. ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *