Breaking News

ಮೈಸೂರಲ್ಲಿ ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದದ್ದನ್ನು ಪ್ರಶ್ನಿಸಿದ್ದಕ್ಕೆ, ತಂದೆ-ಮಗನಿಗೆ ಚಾಕು ಇರಿತ!

ಮಹಿಳೆಯರ ಮುಂದೆ ಶಿಕ್ಷಕ ಮೂತ್ರ ವಿಸರ್ಜನೆ ಮಾಡುತ್ತಿದ್ದ ಆರೋಪ ಹಿನ್ನೆಲೆಯಲ್ಲಿ, ಇದನ್ನು ಪ್ರಶ್ನಿಸಿದ ವ್ಯಕ್ತಿಗೆ ಚಾಕುವಿನಿಂದ ಇರಿದು ಕೊಲೆಗೆ ಯತ್ನಿಸಿರುವ ಘಟನೆ ನಡೆದಿದೆ ಮೈಸೂರು ಜಿಲ್ಲೆಯ ಸಾಲಿಗ್ರಾಮ ತಾಲೂಕಿನ ಚಿಕ್ಕನಾಯಕನಹಳ್ಳಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ಸಿಎಂ ಗೋಪಾಲ್ ಮತ್ತು ಆತನ ಪುತ್ರ ಅಭಿಷೇಕಗೆ ಚಾಕು ಇರಿಲಾಗಿದೆ. ಸರ್ಕಾರಿ ಪ್ರೌಢಶಾಲೆ ಶಿಕ್ಷಕ ಸಿಎಂ ಮಂಜುನಾಥನಿಂದ ಈ ಒಂದು ಕೃತ್ಯ ನಡೆದಿದೆ. ಸಿಎಂ ಗೋಪಾಲ ಸ್ಥಿತಿ ಗಂಭೀರವಾಗಿದ್ದು ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿಕ್ಷಕ ಮಂಜುನಾಥನನ್ನು ಸಾಲಿಗ್ರಾಮ ಪೊಲೀಸರು ಇದೀಗ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶಿಕ್ಷಕ ಮಂಜುನಾಥನನ್ನು ಅಮಾನತು ಮಾಡಿ ಡಿಡಿಪಿಐ ಆದೇಶ ಹೊರಡಿಸಿದ್ದಾರೆ.

Share News

About BigTv News

Check Also

ಹೆಂಡತಿಯನ್ನೇ ಅಟ್ಟಾಡಿಸಿಕೊಂಡು ಆಸಿಡ್ ಎರಚಿ, ಮಚ್ಚಿನಿಂದ ಹಲ್ಲೆ ಮಾಡಿದ ಗಂಡ..!

ಬೆಂಗಳೂರು: ಜೆ.ಪಿ.ನಗರ 3ನೇ ಹಂತದ ನಾರಾಯಣ ಕ್ಲೀನಿಕ್ ಬಳಿ ಪತ್ನಿ ಮಧುಮಿತ ಮೇಲೆ ಪತಿ ವೆಂಕಟೇಶ್ ಆಸಿಡ್ ಎರಚಿ, ಮಚ್ಚಿನಿಂದ …

Leave a Reply

Your email address will not be published. Required fields are marked *