Breaking News

ಆನೇಕಲ್‌ನಲ್ಲಿ ಪೈಶಾಚಿಕ ಕೃತ್ಯ: ಶಾಲಾ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ, ಪೋಕ್ಸೋ ಕೇಸ್ ದಾಖಲು

ಬೆಂಗಳೂರು ಹೊರವಲಯದ ಆನೇಕಲ್ನ ಲ್ಲಿ ಶಾಲಾ ಮಕ್ಕಳ ಮೇಲೆ ನಡೆದ ಪೈಶಾಚಿಕ ಲೈಂಗಿಕ ದೌರ್ಜನ್ಯ ಪ್ರಕರಣ ಆತಂಕ ಮೂಡಿಸಿದೆ. ಆರೋಪಿಯು ಕೃಷ್ಣಮೂರ್ತಿ @ ಕಿಟ್ಟಿ ಎಂಬಾತನಾಗಿದ್ದು, ಶಾಲಾ ಆವರಣ ಹಾಗೂ ಶೌಚಾಲಯದಲ್ಲಿ ಒಟ್ಟು 9 ವಿದ್ಯಾರ್ಥಿಗಳೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಚಾಕಲೇಟ್ ನೀಡುವುದಾಗಿ ಆಮಿಷವೊಡ್ಡಿ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುತ್ತಿದ್ದನು ಎನ್ನಲಾಗಿದೆ. ಈ ದುಷ್ಕೃತ್ಯಗಳ ಬಗ್ಗೆ ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ ಬಳಿಕ ಪ್ರಕರಣ ಬೆಳಕಿಗೆ ಬಂದಿದೆ. ಖಚಿತ ಮಾಹಿತಿಯ ಮೇರೆಗೆ ನಿನ್ನೆ ಬೆಳಿಗ್ಗೆ ಪೋಷಕರು ಆರೋಪಿಯನ್ನು ಹಿಡಿದು ಆನೇಕಲ್ ಪೊಲೀಸ್ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ತಕ್ಷಣವೇ ಕೃಷ್ಣಮೂರ್ತಿಯನ್ನು ಬಂಧಿಸಿ, ಆತನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಕರಣದ ಕುರಿತು ಹೆಚ್ಚಿನ ತನಿಖೆಯನ್ನು ಪೊಲೀಸರು ಮುಂದುವರಿಸಿದ್ದಾರೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *