Breaking News

ಗೆಳೆಯ ಅಂತ ನಂಬಿಕೆ ಇಟ್ಟದ್ದೇ ತಪ್ಪಾಯ್ತು: ಸ್ನೇಹಿತನ ಅಕೌಂಟ್ ಬಳಸಿ 7 ಕೋಟಿ ರೂ. ವರ್ಗಾವಣೆ

ಬೆಂಗಳೂರು: ಸ್ನೇಹದ ಹೆಸರಿನಲ್ಲಿ ಯುವಕನೊಬ್ಬ ತನ್ನ ಸ್ನೇಹಿತನ ಬ್ಯಾಂಕ್ ಖಾತೆಯನ್ನು ದುರುಪಯೋಗಪಡಿಸಿಕೊಂಡು ಸುಮಾರು 7 ಕೋಟಿ ರೂಪಾಯಿ ಸೈಬರ್ ವಂಚನೆ ನಡೆಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ವಂಚನೆಗೊಳಗಾದ ವಿದ್ಯಾರ್ಥಿ ಹಾಗೂ ಆಯುಷ್ ಎಂಬ ಯುವಕ ಕಳೆದ ಒಂದು ವರ್ಷದಿಂದ ಪರಿಚಯದಲ್ಲಿದ್ದರು. ತನ್ನ ಖಾತೆ ಸ್ಥಗಿತಗೊಂಡಿದೆ ಎಂದು ಹೇಳಿ ಆಯುಷ್, ವಿದ್ಯಾರ್ಥಿಯಿಂದ ಬ್ಯಾಂಕ್ ವಿವರಗಳನ್ನು ಪಡೆದಿದ್ದಾನೆ. ನಂಬಿಕೆಯ ಮೇರೆಗೆ ವಿದ್ಯಾರ್ಥಿ ಪಾಸ್‌ಬುಕ್, ಎಟಿಎಂ ಕಾರ್ಡ್ ಮತ್ತು ಮೊಬೈಲ್ ಸಿಮ್ ನೀಡಿದ್ದಾನೆ ಎಂದು ತಿಳಿದುಬಂದಿದೆ. ಕೆಲ ದಿನಗಳ ನಂತರ ಬ್ಯಾಂಕ್ ಅಧಿಕಾರಿಗಳು ವಿದ್ಯಾರ್ಥಿಯನ್ನು ಸಂಪರ್ಕಿಸಿ, ಅವನ ಖಾತೆಯ ಮೂಲಕ 7 ಕೋಟಿ ರೂಪಾಯಿ ವರ್ಗಾವಣೆ ಆಗಿರುವ ಮಾಹಿತಿ ನೀಡಿದ್ದಾರೆ. ಇದರಿಂದ ಆತ ಬೆಚ್ಚಿಬಿದ್ದಿದ್ದಾನೆ. ತಕ್ಷಣವೇ ಬ್ಯಾಂಕ್ ಖಾತೆಯನ್ನು ಸ್ಥಗಿತಗೊಳಿಸಲಾಗಿದೆ. ಈ ಕುರಿತು ವಿದ್ಯಾರ್ಥಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾನೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಸ್ನೇಹದ ನೆಪದಲ್ಲಿ ನಡೆದ ಈ ವಂಚನೆ ಪ್ರಕರಣ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದೆ.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *