Breaking News

ಭೀಕರ ಅಪಘಾತ : ಚಿಕಿತ್ಸೆ ಫಲಕಾರಿಯಾಗದೇ ಬೈಕ್ ಸವಾರ ಸಾವು

ಹುಬ್ಬಳ್ಳಿ: ನಗರದ Infosys ಕ್ಯಾಂಪಸ್ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಬೈಕ್ ಸವಾರನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮಹ್ಮದ ನಿಜಾನ್ (26) ಎಂಬ ಯುವಕನಿಗೆ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು Karnataka Institute of Medical Sciences (ಕಿಮ್ಸ್) ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ, ವೈದ್ಯರ ಎಲ್ಲಾ ಪ್ರಯತ್ನಗಳಿಗೂ ಸ್ಪಂದಿಸದೆ ಯುವಕ ಚಿಕಿತ್ಸೆ ವೇಳೆ ಕೊನೆಯುಸಿರೆಳೆದಿದ್ದಾನೆ.
ಇನ್ನೂ, ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ವಾಹನಗಳಿಗೂ ಡಿಕ್ಕಿ ಹೊಡೆದಿರುವುದು ತಿಳಿದುಬಂದಿದೆ.
ಈ ಕುರಿತು ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Share News

About Shaikh BigTv

Check Also

ದೀಪಾವಳಿ ಹಬ್ಬದ ದಿನವೇ ಕುಟುಂಬಸ್ಥರು ಕಣ್ಣೀರು! ಅಡ್ಡಾದಿಡ್ಡಿ ಕಾರು ಚಲಾಯಿಸಿ ಬೈಕ್​ ಸವಾರನ ಪ್ರಾಣ ತೆಗೆದ ಮಹಿಳೆ ಪರಾರಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಮಹಿಳೆಯೊಬ್ಬರು ವೇಗವಾಗಿ ಚಲಾಯಿಸುತ್ತಿದ್ದ ಮಹೀಂದ್ರಾ ಥಾರ್ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ 55 ವರ್ಷದ …

Leave a Reply

Your email address will not be published. Required fields are marked *