Breaking News

ಧಾರವಾಡನಲ್ಲಿ ಪ್ರತಿಭಟನೆಯ ಬೆನ್ನಲ್ಲೇ 24 ಸಾವಿರ ಹುದ್ದೆಗಳಿಗೆ ಮಂಜೂರಾತಿ…

ಬೆಂಗಳೂರು : ಕರ್ನಾಟಕದಲ್ಲಿ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಆಗ್ರಹಿಸಿ Dharwadನಲ್ಲಿ ಯುವಕರ ಪ್ರತಿಭಟನೆ ಜೋರಾಗುತ್ತಿದ್ದಂತೆಯೇ ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ…

ಕರ್ನಾಟಕದ ಒಟ್ಟು 32 ಇಲಾಖೆಗಳಲ್ಲಿ 24,300 ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆ ಮಂಜೂರಾತಿ ನೀಡಿದೆ…

ಎ ದರ್ಜೆಯ 542 ಹುದ್ದೆಗಳು, ಬಿ ದರ್ಜೆಯ 619 ಹುದ್ದೆಗಳು ಹಾಗೂ ಎಫ್‌ಡಿಸಿ ದರ್ಜೆಯ 23,119 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಕ್ಲಿಯರೆನ್ಸ್ ನೀಡಿದೆ…

ರಾಜ್ಯದ ವಿವಿಧ ಇಲಾಖೆಗಳಲ್ಲಿ 2.5 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಿದ್ದು, ಹಂತ ಹಂತವಾಗಿ ಅವುಗಳನ್ನು ಭರ್ತಿ ಮಾಡುವುದಾಗಿ ಮುಖ್ಯಮಂತ್ರಿ Siddaramaiah ಈ ಹಿಂದೆ ಘೋಷಿಸಿದ್ದರು..

ಇನ್ನು ರಾಜ್ಯ ಸಿವಿಲ್ ಸೇವಾ ಹುದ್ದೆಗಳ ನೇರ ನೇಮಕಾತಿಯಲ್ಲಿ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗಿದ್ದು, 2027 ಡಿಸೆಂಬರ್ 31ರವರೆಗೆ ಹೊರಡಿಸುವ ಅಧಿಸೂಚನೆಗಳಿಗೆ ಇದು ಅನ್ವಯವಾಗಲಿದೆ…

ಸಿಎಂ ಹೇಳಿದ್ದೇನು.?

ಮುಖ್ಯಮಂತ್ರಿ Siddaramaiah ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡುತ್ತ, ಉದ್ಯೋಗಾಕಾಂಕ್ಷಿಗಳ ಆತಂಕ, ನಿರಾಶೆ ಮತ್ತು ಅನಿಶ್ಚಿತತೆಯನ್ನು ತಾವು ಅರ್ಥಮಾಡಿಕೊಳ್ಳುವುದಾಗಿ ತಿಳಿಸಿದ್ದಾರೆ…

ಪ್ರತಿ ಉದ್ಯೋಗ ಅರ್ಜಿಯ ಹಿಂದೆ ಒಂದು ಕನಸು, ಕುಟುಂಬದ ನಿರೀಕ್ಷೆ ಹಾಗೂ ವರ್ಷಗಳ ಪರಿಶ್ರಮ ಅಡಗಿದೆ. ಯುವಕರ ಭವಿಷ್ಯ ನಮ್ಮಿಗೂ ಅತ್ಯಂತ ಮಹತ್ವದ್ದು,” ಎಂದು ಹೇಳಿದ್ದಾರೆ…

ಸರ್ಕಾರ ಅಧಿಕಾರಕ್ಕೆ ಬಂದಾಗ 2.64 ಲಕ್ಷಕ್ಕೂ ಹೆಚ್ಚು ಹುದ್ದೆಗಳು ಖಾಲಿಯಾಗಿದ್ದವು. ಹಿಂದಿನ ಸರ್ಕಾರದ ಅವಧಿಯಲ್ಲಿ ಸಕಾಲದಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭಿಸದಿರುವುದರಿಂದ ಈ ಸ್ಥಿತಿ ಉಂಟಾಗಿದೆ ಎಂದು ಸಿಎಂ ಆರೋಪಿಸಿದರು…

ವಿರೋಧ ಪಕ್ಷದ ನಾಯಕರು ವಿದ್ಯಾರ್ಥಿಗಳನ್ನು ತಪ್ಪು ಮಾರ್ಗದರ್ಶನ ಮಾಡಿ ರಾಜಕೀಯ ಸ್ವಾರ್ಥಕ್ಕಾಗಿ ಬಳಸಿಕೊಳ್ಳುತ್ತಿರುವುದು ವಿಷಾದನೀಯ ಎಂದು ಅವರು ಕಿಡಿಕಾರಿದರು…

Share News

About Shaikh BigTv

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *