Breaking News

ರಾಜ್ಯದಲ್ಲಿ ಮತ್ತೊಂದು ಬೆಚ್ಚಿ ಬೀಳಿಸೋ ಘಟನೆ : ವಸತಿ ಶಾಲೆಯಲ್ಲೇ `PUC ವಿದ್ಯಾರ್ಥಿನಿ’ ಗರ್ಭಿಣಿ !

ಕೊಪ್ಪಳ: ಜಿಲ್ಲೆಯ ಕನಕಗಿರಿ ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಶಾಲೆಯಲ್ಲಿ ಓದುತ್ತಿದ್ದ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಗರ್ಭಿಣಿಯಾಗಿರುವುದು ಬೆಳಕಿಗೆ ಬಂದಿದ್ದು, ಈ ಸಂಬಂಧ ಓರ್ವ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಕಳೆದ ಫೆಬ್ರವರಿ 19 ರಂದು ವಿದ್ಯಾರ್ಥಿನಿಗೆ ಹಠಾತ್ ರಕ್ತಸ್ರಾವ ಉಂಟಾಗಿತ್ತು. ಆಕೆಯನ್ನು ತಪಾಸಣೆಗೆ ಒಳಪಡಿಸಿದಾಗ ಆಕೆ ಗರ್ಭಿಣಿಯಾಗಿರುವುದು ದೃಢಪಟ್ಟಿದೆ. ಈ ವಿಷಯ ತಿಳಿಯುತ್ತಿದ್ದಂತೆಯೇ ಇಡೀ ಜಿಲ್ಲೆಯಲ್ಲಿ ಸಂಚಲನ ಮೂಡಿದೆ. ಘಟನೆ ಸಂಬಂಧ ದೂರು ದಾಖಲಾಗುತ್ತಿದ್ದಂತೆಯೇ ತನಿಖೆ ಚುರುಕುಗೊಳಿಸಿದ ಪೊಲೀಸರು, ವಿದ್ಯಾರ್ಥಿನಿಯನ್ನು ಪ್ರೀತಿಯ ಜಾಲದಲ್ಲಿ ಸಿಲುಕಿಸಿ ವಂಚಿಸಿದ ಆರೋಪಿಯನ್ನು ಪತ್ತೆಹಚ್ಚಿ ಜೈಲಿಗಟ್ಟಿದ್ದಾರೆ. ಸರ್ಕಾರದ ಸುಪರ್ದಿಯಲ್ಲಿರುವ, ಅತ್ಯಂತ ಕಟ್ಟುನಿಟ್ಟಾದ ಕಾವಲು ಇರಬೇಕಾದ ವಸತಿ ಶಾಲೆಯ ಆವರಣದಲ್ಲೇ ಇಂತಹ ಘಟನೆ ನಡೆದಿರುವುದು ಪೋಷಕರಲ್ಲಿ ತೀವ್ರ ಆತಂಕ ಮೂಡಿಸಿದೆ. ಘಟನೆಯ ಗಂಭೀರತೆ ಅರಿತು ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆಯ ಉನ್ನತ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಪ್ರಕರಣದಲ್ಲಿ ಕರ್ತವ್ಯ ಲೋಪವೆಸಗಿದ ವಾರ್ಡನ್ ಹಾಗೂ ಶಾಲಾ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಸದ್ಯ ಸಂತ್ರಸ್ತ ವಿದ್ಯಾರ್ಥಿನಿಗೆ ವೈದ್ಯಕೀಯ ಮತ್ತು ಮಾನಸಿಕ ನೆರವು ನೀಡಲಾಗುತ್ತಿದ್ದು, ಪೊಲೀಸರು ಪ್ರಕರಣದ ಹೆಚ್ಚಿನ ತನಿಖೆಯನ್ನು ಮುಂದುವರಿಸಿದ್ದಾರೆ.

Share News

About BigTv News

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *