Breaking News

ಜಾತ್ರೆಯಲ್ಲಿ ಪುಂಡರ ಅಟ್ಟಹಾಸ – ಬಲಿ ಕೊಟ್ಟ ಪ್ರಾಣಿಯ ಕಾಲಿನಿಂದ ಜನರಿಗೆ ಹಲ್ಲೆ.!

ದಾವಣಗೆರೆ ನಗರದಲ್ಲಿ ನಡೆದ ದುರ್ಗಾಂಭಿಕಾ ದೇವಿ ಜಾತ್ರೆಯ ವೇಳೆ ಕಿಡಿಗೇಡಿ ಯುವಕರ ಅಟ್ಟಹಾಸದಿಂದ ಭಕ್ತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿರುವ ಘಟನೆ ನಡೆದಿದೆ. ಜಾತ್ರೆ ಸಂಭ್ರಮದ ನಡುವೆ ಏಕಾಏಕಿ ಗುಂಪಾಗಿ ಬಂದ ಕೆಲ ಯುವಕರು ಸಿಕ್ಕಸಿಕ್ಕವರ ಮೇಲೆ ಹಲ್ಲೆ ನಡೆಸಿದ್ದಾರೆ. ದೇವಿಗೆ ಬಲಿ ಕೊಟ್ಟ ಪ್ರಾಣಿಗಳ ಕಾಲುಗಳನ್ನು ಹಿಡಿದು ಜನರ ಮೇಲೆ ದಾಳಿ ನಡೆಸಿದ್ದಾರೆ. ಈ ಅಘಟನೆಯಿಂದ ಸ್ಥಳದಲ್ಲಿ ಗೊಂದಲದ ವಾತಾವರಣ ಉಂಟಾಯಿತು. ಹಲ್ಲೆಯಿಂದ ತಪ್ಪಿಸಿಕೊಳ್ಳಲು ಜನರು ಓಡಾಡುತ್ತಿದ್ದ ದೃಶ್ಯಗಳು ಕಂಡುಬಂದಿವೆ. ಕೆಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದು, ಭಕ್ತರ ಭಯಭೀತ ಓಡುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಕಿಡಿಗೇಡಿಗಳ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *