ಬೆಂಗಳೂರು: ಪೊಲೀಸರು ಜಪ್ತಿ ಮಾಡಿ ನಿಲ್ಲಿಸಿದ್ದ ವಾಹನಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿ 25ಕ್ಕೂ ಅಧಿಕ ವಾಹನಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ಸಮೀಪ ನಡೆದಿದೆ. ಬಾಣಸವಾಡಿ ಪೊಲೀಸರು ಜಪ್ತಿ ಮಾಡಿದಂತಹ ವಾಹನಗಳನ್ನು ಠಾಣೆ ಸಮೀಪದಲ್ಲಿ ನಿಲ್ಲಿಸಿದ್ದರು. ಠಾಣೆ ಪಕ್ಕದಲ್ಲಿಯೇ ಶ್ಮಶಾನವಿದ್ದು, ಅದರಿಂದ ಹಾರಿದ ಕಿಡಿ ವಾಹನಗಳಿಗೆ ತಗುಲಿ ಬೆಂಕಿ ಹೊತ್ತಿಕೊಂಡಿದ್ದು, ನೋಡು ನೋಡುತ್ತಿದಂತೆ ಧಗ ಧಗನೆ ಉರಿದಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಸ್ಥಳೀಯರು ಕೆಲವೊಂದು ವಾಹನಗಳನ್ನು ಪಕ್ಕಕ್ಕೆ ಸರಿಸಿದ್ದಾರೆ. ವಿಷಯ ಸ್ಥಳಕ್ಕೆ ಬಂದ ಅಗ್ನಿಶಾಮಕದ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿದ್ದಾರೆ. ಘಟನೆಯಲ್ಲಿ ಬೈಕ್ ಮತ್ತು ಕಾರು ಸೇರಿದಂತೆ 25ಕ್ಕೂ ಹೆಚ್ಚು ವಾಹನಗಳು ಸುಟ್ಟು ಕರಕಲು ಆಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಈ ಸಂಬಂಧ ಬಾಣಸವಾಡಿಯಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

