Breaking News

ಬಾಲಕಿಯೊಂದಿಗೆ ಮಲ್ಲಿಕಾರ್ಜುನ ಮುತ್ಯಾ ಅನುಚಿತವಾಗಿ ವರ್ತಿಸಿದ ಆರೋಪ

ಯಾದಗಿರಿ : ಜಿಲ್ಲೆಯ ಶಹಾಪುರ ತಾಲ್ಲೂಕಿನ ರೋಜಾ ಮಹೆಲ್ ಗ್ರಾಮದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯವಾಗಿರುವ ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿರುವುದಾಗಿ ಹೇಳಲಾಗುತ್ತಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘಟನೆಯ ವೇಳೆ ಸ್ಥಳದಲ್ಲಿದ್ದ ಕೆಲ ಮಹಿಳೆಯರು ಮತ್ತು ಪುರುಷರು ಈ ವರ್ತನೆಗೆ ವಿರೋಧ ವ್ಯಕ್ತಪಡಿಸದೇ ನಿಂತಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ. Instagram ಹಾಗೂ Facebook ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹಂಚಿಕೆಯಾಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಜನರು ಆಗ್ರಹಿಸಿದ್ದಾರೆ. ಸಾರ್ವಜನಿಕರು ಮೂಢನಂಬಿಕೆಗಳಿಂದ ದೂರವಿದ್ದು ಇಂತಹ ಘಟನೆಗಳನ್ನು ಖಂಡಿಸಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

Share News

About BigTv News

Check Also

ಉಡುಪಿ: ಎಂಬ್ರಾಯ್ಡರಿ ಅಂಗಡಿಗೆ ನುಗ್ಗಿ ಮಾಲಕನ ಮೇಲೆ ಆಸಿಡ್ ದಾಳಿ!

ಉಡುಪಿ: ಬಾಡಿಗೆ ಮನೆಯ ಠೇವಣಿ ಹಣ ಮರಳಿ ನೀಡದ ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಎಂಬ್ರಾಯ್ಡರಿ ಅಂಗಡಿ ಮಾಲಕನ ಮೇಲೆ …

Leave a Reply

Your email address will not be published. Required fields are marked *