Breaking News

ಜಿಎಸ್‌ಟಿ ಅಧಿಕಾರಿಗಳ ಸೋಗಿನಲ್ಲಿ ವಂಚನೆ – ಇಬ್ಬರು ಆರೋಪಿಗಳು ಅರೆಸ್ಟ್

ನಗರದ ಬನಶಂಕರಿಯಲ್ಲಿರುವ ಜಿಎಸ್‌ಟಿ ಪ್ರಧಾನ ಆಯುಕ್ತರ ಕಚೇರಿಯಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದ ನಾಗರಾಜ್ ಹಾಗೂ ದಾದಾಪೀರ್ ಅಧಿಕಾರಿಗಳ ಸೋಗಿನಲ್ಲಿ ವಂಚಿಸಿದ್ದಾರೆ. ಈ ಇಬ್ಬರೂ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ವ್ಯಾಪಾರಿಯ ಬಳಿ ತಾವು ಜಿಎಸ್‌ಟಿ ಅಧಿಕಾರಿಗಳು ಎಂದು ಹೇಳಿಕೊಂಡು ಆತನನ್ನು ಬೆದರಿಸಿ ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡಿರುವ ಆರೋಪ ಕೇಳಿಬಂದಿದೆ. ಹೊರಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಈ ಇಬ್ಬರು, ಸಿಎಲ್‌ಟಿಎಸ್ ಮತ್ತು ಇಂಟಲಿಜೆನ್ಸ್ ಅಧಿಕಾರಿಗಳಂತೆ ನಕಲಿ ಗುರುತಿನ ಚೀಟಿ ಸಿದ್ಧಪಡಿಸಿಕೊಂಡಿದ್ದರು ಎನ್ನಲಾಗಿದೆ. ಜನವರಿ 10ರಂದು ಪೀಣ್ಯದಲ್ಲಿರುವ ಗುಟ್ಕಾ ವ್ಯಾಪಾರಿಯೊಬ್ಬರಿಂದ 5 ಲಕ್ಷ ರೂಪಾಯಿ ವಸೂಲಿ ಮಾಡಿದ್ದ ವಿಚಾರ ಬಹಿರಂಗವಾಗಿದೆ. ಈ ವಿಚಾರ ತಿಳಿದು ಪರಿಶೀಲಿಸಿದಾಗ ನಕಲಿ ಐಡಿ ಕಾರ್ಡ್‌ಗಳು ಹಾಗೂ ಸರ್ಚ್ ವಾರೆಂಟ್ ಪ್ರತಿಗಳು ಪತ್ತೆಯಾಗಿದೆ. ತಕ್ಷಣ ಅಧಿಕಾರಿಗಳು ಬನಶಂಕರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಈ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನೂ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *