Breaking News

ಅಜೀಂ ಪ್ರೇಮ್ ಜಿ ವಿವಿಗೆ ನುಗ್ಗಿ ದಾಂಧಲೆ ಆರೋಪ: 25 ಎಬಿವಿಪಿ ಕಾರ್ಯಕರ್ತರ ವಿರುದ್ಧ ಎಫ್‌ಐಆರ್

ಬೆಂಗಳೂರು: ಅಜೀಂ ಪ್ರೇಮ್ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಆರೋಪದಡಿ ಎಬಿವಿಪಿಯ 25 ಕಾರ್ಯಕರ್ತರ ವಿರುದ್ಧ ಸರ್ಜಾಪುರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ವಿವಿಯ ಭದ್ರತಾ ವಿಭಾಗದ ಮುಖ್ಯಸ್ಥ ಎಸ್. ವಿಲ್ಸನ್ ನೀಡಿದ ದೂರಿನ ಅನ್ವಯ ಸರ್ಜಾಪುರ ಠಾಣೆಯಲ್ಲಿ ಪ್ರಕರಣ ದಾಖಲಿಸಿ 25 ಎಬಿವಿಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಫೆಬ್ರವರಿ 24ರಂದು ಸಂಜೆ ಸರ್ಜಾಪುರದ ಅಜಮ್ ಪ್ರೇಮ್ ಜಿ ವಿಶ್ವವಿದ್ಯಾಲಯದಲ್ಲಿ ಕಾಶ್ಮೀರ ಸೈನಿಕರ ವಿರುದ್ಧ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಆರೋಪಿಸಿ ವಿವಿ ಎದುರು ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಅವರನ್ನು ಪೊಲೀಸರು ಅವರನ್ನು ವಶಕ್ಕೆ ಪಡೆದುಕೊಂಡಿದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *