ವಿಟ್ಲ: ಕೇರಳ ಕಡೆಯಿಂದ ಪೆರುವಾಯಿ ಮಾರ್ಗವಾಗಿ ಲಾರಿಗಳಲ್ಲಿ ಕೆಂಪು ಕಲ್ಲುಗಳನ್ನು ಅಕ್ರಮವಾಗಿ ಕರ್ನಾಟಕಕ್ಕೆ ಸಾಗಿಸುತ್ತಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸ್ ಉಪ ನಿರೀಕ್ಷಕ ರಾಮಕೃಷ್ಣ ಅವರಿಗೆ ಮಾಹಿತಿ ಬಂದ ಮೇರೆಗೆ, ಸಿಬಂದಿ ಜತೆಗೆ ದಾಳಿ ಮಾಡಿ ಆರೋಪಿಗಳನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಬಂಟ್ವಾಳ ಪೆರುವಾಯಿ ಗ್ರಾಮದ ಬೆರಿಪದವು ಎಂಬಲ್ಲಿ ಕೆಂಪುಕಲ್ಲುಗಳನ್ನು ತುಂಬಿಸಿಕೊಂಡು ಬರುತ್ತಿದ್ದ 2 ಲಾರಿಗಳನ್ನು ತಡೆದು, ಚಾಲಕರಾದ ವಿಟ್ಲ ನಿವಾಸಿಗಳಾದ ಸಾಧಿಕ್ (25) ಹಾಗೂ ಮೊಹಮ್ಮದ್ (46) ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಕೆಂಪು ಕಲ್ಲುಗಳನ್ನು ಕೇರಳದ ಧರ್ಮತ್ತಡ್ಕದಿಂದ ವೇಣು ಎಂಬವರು ತುಂಬಿಸಿ ಕಳುಹಿಸಿಕೊಟ್ಟಿರುವುದಾಗಿ ಹಾಗೂ ಈ ಬಗ್ಗೆ ಯಾವುದೇ ಪರವಾನಿಗೆ ಅಥವಾ ದಾಖಲಾತಿಗಳು ಇರುವುದಿಲ್ಲ ಎಂಬುದಾಗಿ ಪರಿಶೀಲನೆಯ ವೇಳೆ ತಿಳಿದುಬಂದಿರುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

