ವಿಟ್ಲ: ಸುಮಾರು ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿ, ಬಂಟ್ವಾಳ ತಾಲೂಕಿನ ಕನ್ಯಾನ ನಿವಾಸಿ ಇಬ್ರಾಹಿಂ ಬಾತೀಸ್ ಎಂಬಾತನನ್ನು ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. ಫೆ.24ರಂದು ವಿದೇಶದಿಂದ ಮರಳುತ್ತಿದ್ದಾಗ ಮಂಗಳೂರು ವಿಮಾನ ನಿಲ್ದಾಣದ ಇಮಿಗ್ರೇಶನ್ ವಿಭಾಗದ ಸಹಕಾರದಿಂದ ವಿಟ್ಲ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಆರೋಪಿಗೆ ಮಾ.7ರ ವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

