Breaking News

ಸ್ವಯಂ ಘೋಷಿತ ದೇವಮಾನವ ಮುತ್ಯಾ ಮೇಲೆ ಪೋಕ್ಸೋ ಕೇಸ್.!

ಯಾದಗಿರಿ: ಮಲ್ಲಿಕಾರ್ಜುನ ಮುತ್ಯಾ ಅಪ್ರಾಪ್ತ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿ, ಆಕೆಗೆ ಹಿಂಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲು ಮಾಡಿಕೊಂಡಿದೆ. ಅಲ್ಲದೇ ಮುತ್ಯಾ ವಿರುದ್ಧ ಪೋಕ್ಸೋ ಕೇಸ್ ಕೂಡ ದಾಖಲಾಗಿದೆ. ಪ್ರಕರಣ ದಾಖಲು ಮಾಡಿಕೊಂಡ ಬಳಿಕ ಯಾದಗಿರಿ ಎಸ್​ಪಿಗೆ ಪತ್ರ ಬರೆದಿರುವ ಆಯೋಗ, ಜಿಲ್ಲೆಯ ಶಹಾಪುರ ತಾಲೂಕಿನ ಮಹಲ್ ರೋಜಾ ಗ್ರಾಮದ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಕೋರಿದೆ. ಅಲ್ಲದೇ ಮಕ್ಕಳ ಹಕ್ಕುಗಳ ಆಯೋಗ ಹಾಗೂ ಪೊಲೀಸರು ಸ್ಥಳ ಮಹಜರು ಮಾಡಿದ್ದಾರೆ, ಪ್ರಕರಣ ದಾಖಲಗುತ್ತಿದ್ದಂತೆ ಮಲ್ಲಿಕಾರ್ಜುನ ಮುತ್ಯಾ ನಾಪತ್ತೆಯಾಗಿದ್ದಾನೆ. ಮುತ್ಯಾ, ಅಪ್ರಾಪ್ತ ಬಾಲಕಿಯೋರ್ವಳ ಕುತ್ತಿಗೆ ಹಿಡಿದು ಎತ್ತಿ ಮಂಚದ ಮೇಲೆ ನಿಲ್ಲಿಸುವುದು, ಆಕೆಯ ಕತ್ತು ಹಿಸುಕಿ ಅಸಭ್ಯವಾಗಿ ವರ್ತಿಸುವುದು ಸೇರಿದಂತೆ ಹಲವು ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲಿ ವೈರಲ್ ಆಗಿವೆ.

Share News

About BigTv News

Check Also

ರೀಲ್ಸ್ ಲೋಕದ ಚೆಲುವೆ ಶವವಾಗಿ ಪತ್ತೆ : ಅತ್ತ ಗಂಡ ವಶಕ್ಕೆ, ಇತ್ತ ಕಂದನ ಆಕ್ರಂದನ.. ಏನಾಯ್ತು..?

ತುಮಕೂರು: ತಾಲೂಕಿನ ಯಲ್ಲಾಪುರ ಗ್ರಾಮದಲ್ಲಿ 24 ವರ್ಷದ ಸುಷ್ಮಿತಾ ಎಂಬ ಯುವತಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದು, ಎರಡೂವರೆ …

Leave a Reply

Your email address will not be published. Required fields are marked *