ಪೊಲೀಸರ ಲಂಚ ಪಡೆಯುವುದೇ ಶಾಶ್ವತವಲ್ಲಭ್ರಷ್ಟಾಚಾರಕ್ಕೆ ಕಾನೂನು ಕಡಿವಾಣಸತ್ಯ ಮತ್ತು ನ್ಯಾಯವೇ ಶಾಶ್ವತ…
ಪ್ರಕರಣವೊಂದರಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗದಗ ಶಹರ ಪೊಲೀಸ್ ಠಾಣೆಯ ಸಹಾಯಕ ಉಪನಿರೀಕ್ಷಕ (ASI) ಸಿ.ವಿ. ಇಂಗಳಹಳ್ಳಿ ₹10,000 ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ…
ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದರ ಅವರ ನೇತೃತ್ವದಲ್ಲಿ ನಡೆದ ಟ್ರ್ಯಾಪ್ ಕಾರ್ಯಾಚರಣೆಯಲ್ಲಿ, ಒಟ್ಟು ₹13,000ಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಯು ₹10,000 ಪಡೆಯುವ ವೇಳೆ ಸಿಕ್ಕಿಬಿದ್ದಿದ್ದಾರೆ ಎಂದು ತಿಳಿದುಬಂದಿದೆ…

ವೀರೇಶ ಪೂಜಾರ ಅವರ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದ್ದು, ಆರೋಪಿಯನ್ನು ವಶಕ್ಕೆ ಪಡೆದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪ್ರಸ್ತುತ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ…
ಈ ಘಟನೆ ಬಳಿಕ ಸಾರ್ವಜನಿಕ ವಲಯದಲ್ಲಿ ಭಾಗದಲ್ಲಿಯೂ, ವಿಶೇಷವಾಗಿ ಟ್ರಾಫಿಕ್ ಪೊಲೀಸರ ಕಾರ್ಯವೈಖರಿಯ ಬಗ್ಗೆ ಲೋಕಾಯುಕ್ತ ಇಲಾಖೆ ಪರಿಶೀಲನೆ ನಡೆಸಬೇಕು” ಎಂಬ ಆಗ್ರಹ ಕೇಳಿಬರುತ್ತಿದೆ…
ಭ್ರಷ್ಟಾಚಾರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಮುಂದುವರಿಯಲಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ…

bigtvnews | Hubli Dharwad News | Kannada News | Karnataka News Hubli News | News In Hubli | Local news

