Breaking News

ಹಲಗೂರು: ಜೂಜಾಟ ಆಡಿದ 16 ಮಂದಿ ಬಂಧನ

ವಿವಿಧ ಕಡೆ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಳೆ 16 ಮಂದಿಯನ್ನು ಹಲಗೂರು ಪೊಲೀಸರು ಬಂಧಿಸಿದ್ದಾರೆ. ಅವರಿಂದ ₹30 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಹಲಗೂರು ಸಮೀಪದ ಚಿಕ್ಕ ಎಲಚಗೆರೆ ಗ್ರಾಮದ ಹೊರವಲಯದಲ್ಲಿ 9 ಮಂದಿಯನ್ನು ಬಂಧಿಸಿದ್ದು, ₹13 ಸಾವಿರ ನಗದನ್ನು ವಶಪಡಿಸಿಕೊಳ್ಳಲಾಗಿದೆ. ಸಮೀಪದ ಹುಚ್ಚೇಗೌಡನದೊಡ್ಡಿ ಆಕ್ರಮವಾಗಿ ಜೂಜಾಟದಲ್ಲಿ ತೊಡಗಿದ್ದ 7 ಮಂದಿ ಜೂಜುಕೋರರನ್ನು ಬಂಧಿಸಿದ್ದು, ಆರೋಪಿಗಳಿಂದ ₹17 ಸಾವಿರ ನಗದು ವಶಪಡಿಸಿಕೊಂಡಿದ್ದಾರೆ. ಮಂಗಳವಾರ ರಾತ್ರಿ ಖಚಿತ ಮಾಹಿತಿ ಅಧರಿಸಿದ ಹಲಗೂರು ಪೊಲೀಸರು ಸರ್ಕಲ್ ಇನ್‌ಸ್ಪೆಕ್ಟರ್ ಬಿ.ಎಸ್.ಶ್ರೀಧರ್ ಮತ್ತು ಪಿಎಸ್‌ಐ ಲೋಕೇಶ್ ಪ್ರತ್ಯೇಕವಾಗಿ ದಾಳಿ ಮಾಡಿದ್ದು, ಜೂಜುಕೋರರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ, ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *