Breaking News

ಲಂಚ ಪಡೆಯುವಾಗ ಲೋಕಾ ಬಲೆಗೆ ಬಿದ್ದ ಇಇ, ಸಿಪಾಯಿ

ಬೀದರ್: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್‌ ಹಾಗೂ ಸಿಪಾಯಿ, ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಚೇರಿಯಲ್ಲಿ ಗುರುವಾರ ಸಂಜೆ ಇಇ ರಾಮಲಿಂಗಪ್ಪ ಬಿರಾದಾರ ಮತ್ತು ಸಿಪಾಯಿ ಬಾಬು, ಗುತ್ತಿಗೆದಾರನಿಂದ ₹50 ಸಾವಿರ ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿ, ನಗದು ಜಪ್ತಿ ಮಾಡಿದ್ದಾರೆ. ಕಾಮಗಾರಿ ಪೂರ್ಣಗೊಳಿಸಿದ ಗುತ್ತಿಗೆದಾರನ ಹಣ ಬಿಡುಗಡೆಗೆ ₹50 ಸಾವಿರ ಲಂಚಕ್ಕೆ ಬೇಡಿಕೆ ಇಡಲಾಗಿತ್ತು. ಖಚಿತ ಮಾಹಿತಿ ಮೇರೆಗೆ ಲೋಕಾಯುಕ್ತ ಎಸ್‌ಪಿ ಸಿದ್ದರಾಜು, ಡಿವೈಎಸ್‌ಪಿ ಹನುಮಂತರಾಯ್ ನೇತೃತ್ವದ ತಂಡ ದಾಳಿ ನಡೆಸಿದೆ ಎಂದು ಲೋಕಾಯುಕ್ತ ಪೊಲೀಸ್‌ ಮೂಲಗಳು ‘ಪ್ರಜಾವಾಣಿ’ಗೆ ತಿಳಿಸಿವೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *