Breaking News

ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ: ಮೂವರು ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಹಿರೇಹಳ್ಳಿ ಸಮೀಪ ನಡೆದಿದೆ.ಗುಬ್ಬಿ ತಾಲೂಕಿನ ಹೊಸಕೆರೆ ಗ್ರಾಮದ ನರಸಿಂಹಮೂರ್ತಿ(38), ಗಂಗಾಧರ(35), ಲೋಹಿತ್(40) ಮೃತಪಟ್ಟವರು ಎಂದು ಹೇಳಲಾಗಿದೆ. ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಚಾಲಕನ ಬದಿ ಕುಳಿತಿದ್ದವರ ತಲೆ ಕಟ್ ಆಗಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡ ಇಬ್ಬರನ್ನು ಚಳ್ಳಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತುಮಕೂರು ಜಿಲ್ಲೆಯ ಇವರು ಕಾರ್ ನಲ್ಲಿ ಮಂತ್ರಾಲಯಕ್ಕೆ ತೆರಳಿದ್ದು, ವಾಪಸ್ ಕುಣಿಗಲ್ ಗೆ ಬರುವಾಗ ಅಪಘಾತ ಸಂಭವಿಸಿದೆ. ಕಾರ್ ಚಾಲಕನ ಅಜಾಗರೂಕತೆ ಮತ್ತು ಅತಿ ವೇಗದ ಚಾಲನೆಯೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಎಸ್‌ಪಿ ರಂಜಿತ್ ಕುಮಾರ್ ಭಂಡಾರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಳಕು ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *