Breaking News

ಶೌಚಾಲಯದಲ್ಲಿ ಯುವತಿ ವಿಡಿಯೋ ಮಾಡಲು ಯತ್ನ: ಮೊಬೈಲ್ ಬೀಳಿಸಿಕೊಂಡು ಆರೋಪಿ ಪರಾರಿ

ಬೆಂಗಳೂರು: ಕಾಮುಕನೊಬ್ಬ ಶೌಚಾಲಯಕ್ಕೆ ತೆರಳಿದ್ದ ಯುವತಿಯ ವಿಡಿಯೋ ಮಾಡಲು ಯತ್ನಿಸಿದ ಘಟನೆ ಬೆಂಗಳೂರಿನ ಮಲ್ಲೇಶ್ವರಂ ಪೊಲೀಸ್ ಠಾಣೆ ವ್ಯಾಪ್ತಿಯ ಪ್ರತಿಷ್ಠಿತ ಕೆಫೆಯೊಂದರಲ್ಲಿ ಗುರುವಾರ ನಡೆದಿದೆ. ಮಲ್ಲೇಶ್ವರದ ಸಂಪಿಗೆ ರಸ್ತೆಯಲ್ಲಿರುವ ಕೆಫೆಗೆ ಹೋಗಿದ್ದ ಯುವತಿ ರಾತ್ರಿ 8.30 ರ ಸುಮಾರಿಗೆ ಶೌಚಾಲಯಕ್ಕೆ ತೆರಳಿದ್ದ ವೇಳೆ ಪಕ್ಕದಲ್ಲಿರುವ ಪುರುಷರ ಶೌಚಾಲಯದಿಂದ ಆರೋಪಿಯೊಬ್ಬ ಕೈ ಮೇಲಕ್ಕೆ ಎತ್ತಿ ಮೊಬೈಲ್ ಮೂಲಕ ಯುವತಿಯ ವಿಡಿಯೋ ಮಾಡಲು ಯತ್ನಿಸಿದ್ದಾನೆ. ಇದನ್ನು ನೋಡಿದ ಯುವತಿ ಜೋರಾಗಿ ಕೂಗಾಡಿದ್ದಾಳೆ. ಗಾಬರಿಯಾದ ಯುವಕ ಮೊಬೈಲ್ ಬೀಳಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ. ಈ ವೇಳೆ ಸ್ಥಳೀಯರು ಆತನನ್ನು ಹಿಡಿಯಲು ಯತ್ನಿಸಿದರೂ ಸಿಗದೇ ಆರೋಪಿ ಪರಾರಿಯಾಗಿದ್ದು, ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂದು ಮೊಬೈಲ್ ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿ ಆರೋಪಿಗಾಗಿ ಶೋಧ ಕಾರ್ಯ ಕೈಗೊಳ್ಳಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *