Breaking News

ಲೈಂಗಿಕ ದೌರ್ಜನ್ಯ ಎಸಗಿ ವಿಡಿಯೋ ವೈರಲ್: ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ವಿಶೇಷ ಚೇತನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರಿ ಶಾಲೆಯ ಶಿಕ್ಷಕ ಮೊಹಮ್ಮದ್ ಅಜರುದ್ದೀನ್ ಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿಯ ಹೆಚ್ಚುವರಿ ಸೆಷನ್ಸ್ ಕೋರ್ಟ್ ನಿಂದ ತೀರ್ಪು ಪ್ರಕಟಿಸಲಾಗಿದೆ. ಕೆಲಸ ಕೊಡಿಸುತ್ತೇನೆ ಎಂದು ಪರಿಚಯವಿದ್ದ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಶಿಕ್ಷಕ ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮಾಡಿಕೊಂಡು ಬೆದರಿಕೆ ಹಾಕಿದ್ದ. 2022ರ ಜೂನ್ 30ರಂದು ಚಪ್ಪಲಿಯಿಂದ ಹಲ್ಲೆ ಮಾಡಿ ಎಳೆದಾಡಿದ್ದ. ಮಹಿಳೆಯೊಂದಿನ ಲೈಂಗಿಕ ವಿಡಿಯೋ ವೈರಲ್ ಮಾಡಿದ್ದ. ಕಳೆದ ಮೂರು ವರ್ಷಗಳ ಹಿಂದೆ ವಿಡಿಯೋ ವೈರಲ್ ಆಗಿದ್ದವು, 2022ರ ಜು. 2ರಂದು ಕಾರಟಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಫೆ. 18ರಂದು ಶಿಕ್ಷಕ ಮೊಹಮ್ಮದ್ ಅಜರುದ್ದೀನ್ ದೋಷಿ ಎಂದು ಘೋಷಿಸಲಾಗಿತ್ತು. ಇಂದು ಶಿಕ್ಷೆ ಪ್ರಕಟಿಸಲಾಗಿದೆ. ನ್ಯಾಯಾಧೀಶರಾದ ಸದಾನಂದ ನಾಗಪ್ಪ ನಾಯ್ಕ್ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.

Share News

About BigTv News

Check Also

ಇಬ್ಬರ ಜಗಳ ಬಿಡಿಸಲು ಹೋದ ಯುವಕನ ಕತ್ತು ಸೀಳಿ ಭೀಕರ ಕೊಲೆ!

ಮಂಡ್ಯ: ಹಣಕಾಸಿನ ವಿಚಾರವಾಗಿ ನಡೆಯುತ್ತಿದ್ದ ಗಲಾಟೆಯನ್ನು ಬಿಡಿಸಲು ಹೋದ 25 ವರ್ಷದ ನಂದನ್ ಎಂಬ ಯುವಕನನ್ನು ಡ್ರ್ಯಾಗರ್‌ನಿಂದ ಕತ್ತು ಸೀಳಿ …

Leave a Reply

Your email address will not be published. Required fields are marked *